
ನವದೆಹಲಿ: ಬೆಂಗಳೂರು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಮಾತುಕತೆ ನಡೆಸಿದ್ದಾರೆ.
ತಮ್ಮ ಭೇಟಿಯ ವೇಳೆ ವಿಧಾನ ಪರಿಷತ್ ಗೆ ಸದಸ್ಯರ ನೇಮಕ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಹನಿಟ್ರ್ಯಾಪ್ ಪ್ರಕರಣ ಕುರಿತಂತೆ ಹಲವು ರಾಜಕೀಯ ಬೆಳವಣಿಗೆಗಳ ಕುರಿತಾಗಿ ರಾಹುಲ್ ಗಾಂಧಿಯವರೊಂದಿಗೆ ಸಿಎಂ ಚರ್ಚೆ ನಡೆಸಿದ್ದಾರೆ.
ವಿಧಾನಪರಿಷತ್ ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ತಮ್ಮ ಆಯ್ಕೆಯ ಕೆಲವು ಹೆಸರುಗಳನ್ನು ಸಿಎಂ ಸೂಚಿಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಈಶ್ವರ್ ಖಂಡ್ರೆ ಅವರ ಹೆಸರನ್ನು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಎಐಸಿಸಿ ಹಿರಿಯ ನಾಯಕರೊಂದಿಗೆ ಸಮಾಲೋಚನೆಯ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ರಾಹುಲ್ ಗಾಂಧಿ ಸಿಎಂಗೆ ತಿಳಿಸಿದ್ದಾರೆ. ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಪ್ರಕ್ರಿಯೆ ವಿಳಂಬವಾಗಲಿದ್ದು, ನಂತರ ಹೈಕಮಾಂಡ್ ನಾಯಕರು ಚರ್ಚೆ ನಡೆಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿಧಾನ ಪರಿಷತ್ ಗೆ ನೇಮಕಾತಿ ಕುರಿತಾಗಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಹಲವು ಮಹತ್ವದ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದೆ. pic.twitter.com/0XrgDHnvLK
— Siddaramaiah (@siddaramaiah) April 3, 2025