HomeLatest NewsBREAKING: ಪೌರಾಯುಕ್ತೆಗೆ ನಿಂದನೆ, ಜೀವಬೆದರಿಕೆ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ

BREAKING: ಪೌರಾಯುಕ್ತೆಗೆ ನಿಂದನೆ, ಜೀವಬೆದರಿಕೆ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನೋಟಿಸ್ ಜಾರಿ ಮಾಡಿದೆ.

ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದರು. ಜನರನ್ನು ಕಳುಹಿಸಿ ಚಪ್ಪಲಿಯಲ್ಲಿ ಹೊಡೆದು ಬೆಂಕಿ ಹಚ್ಚುವುದಾಗಿ ಬಾಯಿಗೆ ಬಂದಂತೆ ಬೈದಿದ್ದರು. ಈ ಕುರಿತ ಆಡಿಯೋ ಕೂಡ ವೈರಲ್ ಆಗಿತ್ತು. ಘಟನೆ ಬೆನ್ನಲ್ಲೇ ಪೌರಾಯುಕ್ತೆ ಅಮೃತಾ ಗೌಡ ಹಾಗೂ ನಗರಸಭೆ ಸಿಬ್ಬಂದಿಗಳು ರಾಜೀವ್ ಗೌಡ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ರಾಜೀವ್ ಗೌಡ ವಿರುದ್ಧ ದೂರು ನೀಡಿದ್ದರು. ಜೆಡಿಎಸ್ ನಾಯಕರು ಕೂಡ ರಾಜೀವ್ ಗೌಡ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು.

ರಾಜೀವ್ ಗೌಡ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿವೆ. ಪ್ರಕರಣ ದಾಖಲಾಗುತ್ತಿದ್ದಂರೆ ರಾಜೀವ್ ಗೌಡ ತಲೆಮರೆಸಿಕೊಂಡು ನಾಪತ್ತೆಯಾಗಿದ್ದಾರೆ. ಮಹಿಳಾ ಅಧಿಕಾರಿಗೆ ನಿಂದನೆ ಹಾಗೂ ಧಮ್ಕಿ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ತಕ್ಷಣ ಬಂಧಿಸಬೇಕು. ಬಂಧಿಸದಿದ್ದರೆ ಬಿಜೆಪಿ ಹಾಗೂ ಜೆಡಿಎಸ್ ನಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ರಾಜೀವ್ ಗೌಡ ಅವರನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚಿಸಿದ್ದು, ಅವರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಇನ್ನೊಂದೆಡೆ ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕ್ರಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಹೇಳಿಕೆ ನೀಡಿದ್ದರು. ರಾಜೀವ್ ಗೌಡ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಕೆಪಿಸಿಸಿ, ರಾಜೀವ್ ಗೌಡಗೆ ನೋಟಿಸ್ ಜಾರಿ ಮಾಡಿದೆ.

ಪೌರಾಯುಕ್ತೆ ಜೊತೆ ತಾವು ಆಡಿರುವ ಮಾತುಗಳಿಂದ ಪಕ್ಷಕ್ಕೆ ಮುಜುಗರವಾಗಿದೆ. ಈ ಬಗ್ಗೆ ಒಂದು ವಾರದೊಳಗೆ ಸೂಕ್ತ ಕಾರಣ ನೀಡಿ ಉತ್ತರಿಸಬೇಕು. ಇಲ್ಲವಾದಲ್ಲಿ ನಿಮ್ಮ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular