HomeKarnatakaBIG NEWS: ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

BIG NEWS: ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಕಲಬುರಗಿ: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್​​ ಮುಖ್ಯಮ್ನಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಪೈಪೋಟಿ ಜೋರಾಗಿದೆ. ಸತೀಶ್ ಜಾರಕಿಹೊಳಿ ಮೊದಲಿನಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಈಗ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕೂಡ ಈ ರೇಸ್ ಗೆ ಎಂಟ್ರಿಯಾಗಿದ್ದು, ಲಾಭಿ ತೀವ್ರಗೊಂಡಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗುತ್ದೆ. ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುತ್ತೇವೆ. ಸಿಎಂಗೆ ಉತ್ತಮ ಸಮನ್ವಯ ಇರಬೇಕು, ಅಂತವರನ್ನು ಆಯ್ಕೆ ಮಾಡ್ತೇವೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಗೆ ಕೇವಲ 24 ತಿಂಗಳು ಮಾತ್ರ ಬಾಕಿಯಿರುವ ಕಾರಣ ಎಲೆಕ್ಷನ್​​ ಮತ್ತು ಪಕ್ಷ ಕಟ್ಟುವ ದೃಷ್ಟಿಯಿಂದ ಆಯ್ಕೆ ಮಾಡಬೇಕಾಗುತ್ತೆ. ಸ್ಪೀಡ್ ಆಗಿ, ಕಲೆಕ್ಟಿವ್ ಆಗಿ ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ನಾಯಕನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾವು ಹುಡುಕಬೇಕಿದೆ. ಜೊತೆಗೆ ಅವರಿಗೆ ಕೋ-ಆಪರೇಟ್ ಮಾಡುವ ಜನರೂ ಇರಬೇಕಾಗುತ್ತದೆ. ಇವೆಲ್ಲವನ್ನೂ ವಿಚಾರ ಮಾಡಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular