ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅದ್ಧೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್ ಅವರಿಗೆ ಪಟ್ಟಾಭಿಷೇಕ ಮಾಡಲಾಯಿತು.
ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್ ಅವರಿಗೆ ಪಕ್ಷದ ದ್ವಜ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ಈ ಮುಲಕ ಇಂದಿನಿಂದ ಅಧಿಕೃತವಾಗಿ ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಸಾರಥ್ಯ ವಹಿಸಿಕೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ,ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಉನ್ನತ ನಾಯಕರು ಮತ್ತು ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

