HomeKarnatakaಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ಡಿಢೀರ್ ರಾಜೀನಾಮೆ: ಕಾರಣವೇನು?

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ಡಿಢೀರ್ ರಾಜೀನಾಮೆ: ಕಾರಣವೇನು?

ಬೆಂಗಳೂರು: ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.

ಸೌಮ್ಯಾ ರೆಡ್ಡಿ ಅವರು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಏಕಾಏಕಿ ರಾಜೀನಾಮೆ ನೀಡಿರುವುದು ಕಾಂಗ್ರೆಸ್​​ ಪಾಳಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡುವುದಾಗಿ ಹಾಗೂ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತಳಾಗಿ ಕಾರ್ಯನಿರ್ವಹಿಸುವುದಾಗಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಸಚಿವ ಸಂಪುಟದಲ್ಲಿ ಒಬ್ಬರೂ ಮಹಿಳಾ ಸಚಿವರೇ ಇಲ್ಲದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸೌಮ್ಯಾ ರೆಡ್ಡಿ ಅವರು ಎಐಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನಮಾನ ನೀಡಿಲ್ಲ ಎಂಬ ಅಸಮಾಧನ ಈ ಮೊದಲ್ಲೇ ಕಾಂಗ್ರೆಸ್​​ನಲ್ಲಿ ಇತ್ತು. ಅದರೂ ಕಾಂಗ್ರೆಸ್​ ಹೈಕಮಾಂಡ್​ ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿರಲಿಲ್ಲ. ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೂಡ ಇದಕ್ಕೆ ನಾನೇ ಕಾರಣ ಎಂಬ ಅಚ್ಚರಿಯ ಹೇಳಿಕೆಯನ್ನು ಕೂಡ ನೀಡಿದ್ದರು. ಈ ಎಲ್ಲ ಗೊಂದಲದ ಬಳಿಕ ಮಹಿಳೆಯರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂಬ ಭರವಸೆಯನ್ನು ಹೈಕಮಾಂಡ್​​​ ನೀಡಿತ್ತು. ಆದರೆ ಇಲ್ಲಿಯವರೆಗೂ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ಸಿಕ್ಕಿಲ್ಲ. ಇದೀಗ ಇದರಿಂದ ಅಸಮಾಧನಗೊಂಡು ಸೌಮ್ಯಾ ರೆಡ್ಡಿ ಅವರು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಅಪರಾಧಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್

ಮೈಸೂರು: ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮೈಸೂರು ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿ ತೀರ್ಪು ಪ್ರಕಟಸಿದೆ.

ಮೈಸೂರಿನ ಜಿಲ್ಲಾ ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶ ಅನಿಲ್.ಪಿ.ವಘಾಡೆ ಅಪರಾಧಿ ಕಾರ್ತಿಕ್ ಗೆ ಗಲ್ಲುಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಕಾರ್ತಿಕ್‌ ಅಪರಾಧ ಎಸಗಿರುವುದು ಸಾಬೀತಾದ ಹಿನ್ನೆಲೆ ಮೈಸೂರು ಶೀಘ್ರಗತಿ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇದೀಗ ಕಾಮುಕನಿಗೆ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದೆ.’

ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ದಸರಾ ಹಿನ್ನೆಲೆ ಕುಟುಂಬವೊಂದು ಕಲಬುರಗಿಯಿಂದ ಬಲೂನ್ ಮಾರಲು ಮೈಸೂರಿಗೆ ಬಂದಿತ್ತು. ಆ ಕುಟುಂಬ ದಸರಾ ವಸ್ತುಪ್ರದರ್ಶನ ಬಳಿ ಅರಮನೆ ಬಳಿ ದೊಡ್ಡಕೆರೆ ಮೈದಾನದಲ್ಲಿ ಟೆಂಟ್‌ನಲ್ಲಿ ವಾಸ್ತವ್ಯ ಹೂಡಿತ್ತು. ಕುಟುಂಬಸ್ಥರೆಲ್ಲರೂ ಮಲಗಿದ್ದಾಗ ಕಾಮುಕ ಕಾರ್ತಿಕ್‌ 9 ವರ್ಷದ ಬಾಲಕಿಯನ್ನ ಎಳೆದೊಯ್ದು ಅತ್ಯಾಚಾರವೆಸಗಿ ಭೀಕರವಾಗಿ ಕೊಲೆ ಮಾಡಿದ್ದ.

ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಘಟನೆ ನಡೆದ 24 ಗಂಟೆಯಲ್ಲಿ ಆರೋಪಿಯನ್ನ ಬಂಧಿಸಲಾಗಿತ್ತು. ಈ ಪ್ರಕರಣವನ್ನ ಮೈಸೂರಿನ ಫಾಸ್ಟ್‌ಟ್ರ್ಯಾಕ್‌ ಕೋರ್ಟ್‌ ವಿಚಾರಣೆ ನಡೆಸಿತ್ತು. ತನಿಖೆ ವೇಳೆ ಆರೋಪಿಯ ಅಪರಾಧ ಸಾಭಿತಾದ ಹಿನ್ನೆಲೆಯಲ್ಲಿ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇದೀಗ ಅಪರಾಧಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular