BIG NEWS: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ರದ್ದು

ಬೆಂಗಳೂರು: ಇಂದು ದಾವಣಗೆರೆ ಹಾಗೂ ರಾಮನಗರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಧಿಢೀರ್ ರದ್ದಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹಠಾತ್ ನಿಧನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ದಾವಣಗೆರೆ ಹಾಗೂ ರಾಮನಗರದಲ್ಲಿ ಇಂದು ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆ, ಸಮಾವೇಶಗಳನ್ನು ರದ್ದುಪಡಿಸಲಾಗಿದೆ.

ಇನ್ನು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿಯನ್ನು ಕೂಡ ರದ್ದು ಮಾಡಲಾಗಿದೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಪ್ರಿಯಾಂಕ್ ಖರ್ಗೆ ಕರೆದಿದ್ದ ಸುದ್ದಿಗೋಷ್ಠಿಯನ್ನು ರದ್ದುಗೊಳಿಸಲಾಗಿದ್ದು, ಧ್ರುವನಾರಾಯಣ ನಿಧನ ಹಿನ್ನೆಲೆಯಲ್ಲಿ ಎಲ್ಲಾ ಕಾಂಗ್ರೆಸ್ ನಾಯಕರು ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read