HomeKarnatakaಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆಗೆ ತಾತ್ಕಾಲಿಕ ತಡೆ

ಗ್ರಾಮ ಪಂಚಾಯತಿ ನೇಮಕಾತಿ ಅಧಿಸೂಚನೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಗ್ರಾಮ ಪಂಚಾಯತಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಅಧಿಸೂಚನೆಯನ್ನು ತಡೆ ಹಿಡಿಯುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಚಾಯತ್ ರಾಜ್ ಇಲಾಖೆ ಸೂಚಿಸಿದೆ.

ಕರ್ನಾಟಕ ಪಂಚಾಯತ್ ರಾಜ್ಯ ಆಯುಕ್ತಾಲಯ ಆಯುಕ್ತರು, ರಾಜ್ಯದ ಜಿಲ್ಲಾ ಪಂಚಾಯತಿಗಳ ಎಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಕುರಿತಾಗಿ ಸೂಚನೆ ನೀಡಲಾಗಿದೆ.

ಪಂಚಾಯತ್ ರಾಜ್ ಆಯುಕ್ತಾಲಯದ ಪತ್ರ ಸಂಖ್ಯೆ ಕೆಪಿಆರ್‌ಸಿ/386/2025 ಡಿಡಿ1 ದಿನಾಂಕ:12-08-2026 ರ ಪ್ರಕಾರ ಗ್ರಾಮ ಪಂಚಾಯತಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಅಧಿಸೂಚನೆಯನ್ನು ತಡೆ ಹಿಡಿಯುವ ಬಗ್ಗೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಮನವಿ ಪರಿಶೀಲಿಸಲಾಗಿ, ಭೀಮರೆಡ್ಡಿ ಪಾಟೀಲ್, ರಾಜ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟ‌ರ್ ನೌಕರರ ಕ್ಷೇಮಾಭಿವೃದ್ಧಿ ಸಂಘ ರವರು ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಜೊತೆಯಲ್ಲಿ ಇನ್ನೊಬ್ಬ ಡಾಟಾ ಎಂಟ್ರಿ ಅಪರೇಟರ್ ಕರ್ತವ್ಯ ನಿರ್ವಹಿಸುತ್ತಿದ್ದು, ಅಂತಹ ಗ್ರಾಮ ಪಂಚಾಯತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ ಪದೋನ್ನತಿ/ನಿವೃತ್ತಿ ಹಾಗೂ ಇನ್ನಿತರ ಕಾರಣಗಳಿಂದ ಖಾಲಿಯಾದ ಪಂಚಾಯತಿಗಳಲ್ಲಿ ಡಾಟಾ ಎಂಟ್ರಿ ಅಪರೇಟರ್ ನೇಮಕಾತಿ ಮಾಡಿಕೊಳ್ಳಲು ಕಡತ ತಿದ್ದುಪಡಿ ಹಂತದಲ್ಲಿ ಇರುವದರಿಂದ ಹಾಗೂ ಅನುಮೋದನೆಗೊಂಡ ನಂತರ ನೇರ ನೇಮಕಾತಿ ಮಾಡಿಕೊಳ್ಳಲು ಎಲ್ಲಾ ಜಿಲ್ಲಾ ಪಂಚಾಯತಿಗಳಿಗೆ ಸೂಕ್ತ ನಿದೇರ್ಶನ ನೀಡುವುದು ಮತ್ತು ಕಡತ ಸಂಖ್ಯೆ ಕೆಪಿಆರ್‌ಸಿ/386/2025 ಡಿಡಿ1 ದಿನಾಂಕ:12-08-2026 ರಂದು ಹೊರಡಿಸಿರುವ ಆದೇಶದಂತೆ ಪ್ರಸ್ತುತ ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಹಿಂಪಡೆದು, ತಿನ್ನುಪಡಿ ಮೂಲಕ ಮರು ಆದೇಶ ಮಾಡಿ ಉಳಿದ ಹುದ್ದೆ ನೇಮಕಾತಿ ಮಾಡಲು ಜಿಲ್ಲಾ ಪಂಚಾಯತಿಗಳಿಗೆ ಆದೇಶ ಮಾಡುವ ಬಗ್ಗೆ, ಕೋರಿರುತ್ತಾರೆ.

ಆದುದರಿಂದ, ಗ್ರಾಮ ಪಂಚಾಯಿತಿಗಳಲ್ಲಿ ದಿನಾಂಕ:31-10-2017 ರ ಪೂರ್ವದಲ್ಲಿ ನೇಮಕಗೊಂಡಿರುವ /ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಜೊತೆಯಲ್ಲಿ ಇನ್ನೊಬ್ಬ ಡಾಟಾ ಎಂಟ್ರಿ ಆಪರೇಟರ್ ಕರ್ತವ್ಯ ನಿರ್ವಹಿಸುತ್ತಿದ್ದಲ್ಲಿ ಅಂತಹ ಗ್ರಾಮ ಪಂಚಾಯತಿಗಳಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವ್ಯಂದದಿಂದ ಪದೋನ್ನತಿ/ನಿವೃತ್ತಿ ಹಾಗೂ ಇನ್ನಿತರ ಕಾರಣಗಳಿಂದ ಖಾಲಿಯಾದ ಗ್ರಾಮ ಪಂಚಾಯತಿಗಳಲ್ಲಿ, ಡಾಟಾ ಎಂಟ್ರಿ ಅಪರೇಟರ್ ಗಳ ಅನುಮೋದನೆ ನೀಡುವ ಪ್ರಸ್ತಾವನೆಯ ಕಡತವು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ. ಆದ್ದರಿಂದ, ಪಂಚಾಯತ್ ರಾಜ್ ಆಯುಕ್ತಾಲಯದ ಪತ್ರ ಸಂಖ್ಯೆ :ಕೆಪಿಆರ್‌ಸಿ/386/2025 ಡಿಡಿ1, ದಿನಾಂಕ:12-08-2026 ರ ಪ್ರಕಾರ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದಲ್ಲಿ ಸರ್ಕಾರದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನೇಮಕಾತಿ ಅಧಿಸೂಚನೆಯನ್ನು ತಡೆ ಹಿಡಿಯುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular