HomeKarnatakaಶುಭ ಸುದ್ದಿ: ಒಂದೇ ಕ್ಯಾಂಪಸ್ ನಲ್ಲಿ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿವರೆಗೆ ಕನ್ನಡ, ಆಂಗ್ಲ ಮಾಧ್ಯಮ...

ಶುಭ ಸುದ್ದಿ: ಒಂದೇ ಕ್ಯಾಂಪಸ್ ನಲ್ಲಿ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿವರೆಗೆ ಕನ್ನಡ, ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು 3 ಸಾವಿರ ಪಬ್ಲಿಕ್ ಸ್ಕೂಲ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುವುದು. ಅಲ್ಲದೇ, ಶೂನ್ಯ ದಾಖಲಾತಿ ಹೊಂದಿರುವ 600 ಸರ್ಕಾರಿ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಬದಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತಾಗಿ ಮಾಹಿತಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸಿ ವಿದ್ಯಾರ್ಥಿಗಳನ್ನು ಸೆಳೆಯುವ ಉದ್ದೇಶದಿಂದ ಪ್ರತಿ ಎರಡು ಗ್ರಾಮ ಪಂಚಾಯಿತಿಗೆ ಒಂದರಂತೆ 3000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮುಂದಿನ ಐದು ವರ್ಷಗಳಲ್ಲಿ ಆರಂಭಿಸಲಾಗುವುದು. ಈ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಕ್ಯಾಂಪಸ್ ನಲ್ಲಿ ತರಗತಿಗಳು ನಡೆಯಲಿವೆ. ಕನ್ನಡ ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಕೂಡ ಇರಲಿದ್ದು, ಇದಕ್ಕಾಗಿ ಅಗತ್ಯವಿರುವ 2500 ಕೋಟಿ ರೂ. ಅನುದಾನವನ್ನು ಸಿಎಸ್ಆರ್ ಅಡಿಯಲ್ಲಿ ಸಂಗ್ರಹಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular