ಶಿವಮೊಗ್ಗ: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಕೆಪಿಎಸ್ ಶಾಲೆಗಳಿಗೆ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅನವಟ್ಟಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಕೆಪಿಎಸ್ ಶಾಲೆಗಳಿಗೆ ಮಕ್ಕಳಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಕಲ್ಪಿಸಲಾಗುವುದು. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲು ಮತ್ತು ಮನೆಗೆ ಬಿಡಲು ಸ್ವಂತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಗ್ರಾಮೀಣ ಭಾಗಗಳಿಂದ ಶಾಲಾ, ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸದ್ಯಕ್ಕೆ ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗುವುದು. ಸುಮಾರು 4000 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ 1 ಸಾವಿರ ಕೆಪಿಎಸ್ ಶಾಲೆಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

