KPSC ಗ್ರೂಪ್ ‘ಸಿ’ ವೃಂದದ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್ ‘ಸಿ’ ವೃಂದದ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಒಟ್ಟು 18 ಇಲಾಖೆಗಳ 350ಕ್ಕೂ ಅಧಿಕ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ, ವಿಕಾಸ್ ಕಿಶೋರ್ ಸುರಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದು, ಪ್ರಕಟಗೊಂಡ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 140 ವಾರ್ಡನ್ ಹುದ್ದೆ, 17 ಸಾಂಖ್ಯಿಕ ನಿರೀಕ್ಷಕರು, 24 ಕಿರಿಯ ಲೆಕ್ಕ ಸಹಾಯಕರು, 66 ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, 45 ಗಣತಿದಾರರು, 20 ಲೆಕ್ಕ ಪರಿಶೋಧಕರು ಹುದ್ದೆಗಳು ಸೇರಿವೆ.

ಹೆಚ್ಚಿನ ವಿವರಗಳು ಆಯೋಗದ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಈಗ ಪ್ರಕಟವಾಗಿರುವ ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತು ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ಅಭ್ಯರ್ಥಿಗಳು ಏಳು ದಿನಗಳ ಒಳಗಾಗಿ ಆಯೋಗಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read