HomeKarnatakaKPSC 'ಬಿ' ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ...

KPSC ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಪರೀಕ್ಷೆಗಳನ್ನು ಏಪ್ರಿಲ್ 11 ಮತ್ತು 12 ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ http://kpsc.kar.nic.in ಮೂಲಕ ಏಪ್ರಿಲ್ 5 ರಿಂದಲೇ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದ್ದು, ಒಂದೊಮ್ಮೆ ಈ ವೇಳೆ ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಹೆಲ್ಪ್ ಲೈನ್ ಸಂಖ್ಯೆ 18005728707 ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ, ಸುರಳ್ಕರ್ ವಿಕಾಸ್ ಕಿಶೋರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular