ಇಂದು ʻKPSCʼ ಲೆಕ್ಕ ಸಹಾಯಕರ ಹುದ್ದೆಗಳಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಇಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಗ್ರೂಪ್‌ ಸಿ ವೃಂದದ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಅಭ್ಯರ್ಥಿಗಳ ನೈಜತೆ ಪತ್ತೆಗೆ ಬಯೋಮೆಟ್ರಿಕ್‌ ಫೇಸ್‌ ರೆಕಗ್ನಿಷನ್‌ ವ್ಯವಸ್ಥೆ ಬಳಕೆ ಮಾಡಲಾಗುತ್ತಿದೆ. ಪರೀಕಷಾ ಕೇಂದ್ರದ ವ್ಯಾಪ್ತಿಯಲ್ಲಿ ಮೊಬೈಲ್‌ ನೆಟ್‌ ವರ್ಕ್‌ ಜಾಮರ್‌ ಅಳವಡಿಸಲಾಗಿದ್ದು, ಪರೀಕ್ಷಾ ಉಪ ಕೇಂದ್ರಗಳ ಸಂವೀಕ್ಷಕರಿಗೆ ಬಾಡಿ ಕ್ಯಾಮೆರಾವನ್ನು ಅಳವಡಿಸಲಾಗುತ್ತದೆ. ಈ ಮೂಲಕ ಬ್ಲೂಟೂತ್‌ ಬಳಸಿ ಪರೀಕ್ಷಾ ಅಕ್ರಮ ನಡೆಸುವ ಹುನ್ನಾರಗಳಿಗೆ ಕಡಿವಾಣ ಹಾಕಲಾಗಿದೆ.

ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಅಭ್ಯರ್ಥಿಗಳು ಯಾವುದೇ ಆಧುನಿಕ ಉಪಕರಣ, ಮೊಬೈಲ್‌ ಫೋನ್‌, ಬ್ಲೂಟೂತ್‌, ಕ್ಯಾಲ್‌ ಕ್ಯುಲೇಟರ್‌, ವೈಟ್‌ ಫಲ್ಯೂಯೆಟ್‌, ವೈರ್‌ ಲೆಸ್‌ ಸೆಟ್‌ ಗಳು. ಪೇಪರ್‌, ಬುಕ್‌ ತೆಗೆದುಕೊಂಡು ಹೋಗುವಂತಿಲ್ಲ

ಮಂಗಳಸೂತ್ರ, ಕಾಲೂಂಗರ ಹೊರತುಪಡಿಸಿ ಯಾವುದೇ ಆಭರಣ ಧರಿಸುವಂತಿಲ್ಲ. ಕಿವಿ, ಬಾಯಿ ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ಫಿಲ್ಟರ್‌ ಇರುವ ಫೇಸ್‌ ಮಾಸ್ಕ್‌ ಅನ್ನು ಧರಿಸುವಂತಿಲ್ಲ.

ತುಂಬು ತೋಳಿನ ಶರ್ಟ್‌, ಫುಲ್‌ ಓವರ್‌, ಜಾಕೆಟ್‌, ಸ್ವೆಟರ್‌ ಧರಿಸುವಂತಿಲ್ಲ

ಲೋಹದ ನೀರಿನ ಬಾಟಲಿ, ಪಾರದರ್ಶಕವಲ್ಲದ ನೀರಿನ ಬಾಟಲಿಗೆ ನಿಷೇಧ

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read