HomeKarnatakaಕೆಪಿಎಸ್ಸಿ ಅಧಿಕೃತ ವೆಬ್‌ಸೈಟ್ ವಿಳಾಸ ಬದಲಾವಣೆ: ಹೊಸ ಪೋರ್ಟಲ್ ಆರಂಭಿಸಿದ ಲೋಕಸೇವಾ ಆಯೋಗ

ಕೆಪಿಎಸ್ಸಿ ಅಧಿಕೃತ ವೆಬ್‌ಸೈಟ್ ವಿಳಾಸ ಬದಲಾವಣೆ: ಹೊಸ ಪೋರ್ಟಲ್ ಆರಂಭಿಸಿದ ಲೋಕಸೇವಾ ಆಯೋಗ

​ಬೆಂಗಳೂರು-ಕರ್ನಾಟಕ ಲೋಕಸೇವಾ ಆಯೋಗವು (KPSC) ತನ್ನ ಅಧಿಕೃತ ವೆಬ್‌ಸೈಟ್ ವಿಳಾಸವನ್ನು ಬದಲಾಯಿಸಿದ್ದು, ಅಭ್ಯರ್ಥಿಗಳು ಹಾಗೂ ಸಾರ್ವಜನಿಕರ ಮಾಹಿತಿಗಾಗಿ ನೂತನ ವೆಬ್‌ಸೈಟ್ ಪೋರ್ಟಲ್ ಅನ್ನು ಚಾಲ್ತಿಗೆ ತಂದಿದೆ.

​ಆಡಳಿತಾತ್ಮಕ ಕಾರಣಗಳಿಂದಾಗಿ ಈ ಬದಲಾವಣೆಯನ್ನು ಮಾಡಲಾಗಿದ್ದು, ಈ ಹಿಂದೆ ಬಳಕೆಯಲ್ಲಿದ್ದ ವೆಬ್‌ಸೈಟ್ ವಿಳಾಸ https://kpsc.kar.nic.in ಅನ್ನು ಬದಲಾಯಿಸಿ, ಈಗ *ಹೊಸದಾಗಿ https://kpsc.karnataka.gov.in* ವೆಬ್‌ಸೈಟ್ ವಿಳಾಸವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ.

​ಇನ್ಮುಂದೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಂಬಂಧಿಸಿದ ಎಲ್ಲಾ ಅಧಿಕೃತ, ಅಧಿಸೂಚನೆಗಳು ಹಾಗೂ ಅಭ್ಯರ್ಥಿಗಳಿಗೆ ಅಗತ್ಯವಿರುವ ಮಾಹಿತಿಗಳನ್ನು ಪಡೆಯಲು ನೂತನ ವೆಬ್‌ಸೈಟ್ https://kpsc.karnataka.gov.in ಅನ್ನು ಮಾತ್ರ ವೀಕ್ಷಿಸಬೇಕೆಂದು ಆಯೋಗದ ಕಾರ್ಯದರ್ಶಿಯವರಾದ ಜ್ಯೋತಿ ಕೆ. ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular