BREAKING : ಇಂದು ಮತ್ತು ನಾಳೆ ನಿಗದಿಯಾಗಿದ್ದ ‘KPSC’ ಯ ಕೃಷಿ ಅಧಿಕಾರಿ ಹುದ್ದೆಯ ಪರೀಕ್ಷೆ ರದ್ದು |KPSC Exam

ಕರ್ನಾಟಕ ಲೋಕಸೇವಾ ಆಯೋಗವು ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹಾಗೂ ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳಿಗೆ ಸೆ.06 ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸೆ.07 ಹಾಗೂ ಅಕ್ಟೋಬರ್ 04 ರಂದು ನಡೆಸಲು ನಿಗದಿಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಆಯೋಗವು ತಿಳಿಸಿದೆ.

ಆಯೋಗದ ಅಧಿಸೂಚನೆ ಸಂಖ್ಯೆ ಪಿಎಸ್ಸಿ 1 ಆರ್ಟಿಬಿ-4/2024 ದಿನಾಂಕ 20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 31-12-2024ರನ್ವಯ ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹುದ್ದೆಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳಿಗೆ ಸೆ.06 ರಂದು ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು ಸೆ.07 ಹಾಗೂ ಅಕ್ಟೋಬರ್ 04 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ನಿಗದಿಪಡಿಸಲಾಗಿತ್ತು.

ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 388 ಸೆನೆನಿ 2024 ಭಾ-3, ದಿನಾಂಕ:04-09-2025ರಂದು ಹೊರಡಿಸಿರುವ ಸುತ್ತೋಲೆಯಲ್ಲಿ “ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಸಹ ರದ್ದುಗೊಳಿಸಿ, ಪರಿಶಿಷ್ಟಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹಾಗೂ ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳಿಗೆ ಸೆ.06 ರಂದು ಕನ್ನಡ ಭಾಷಾ ಪರೀಕ್ಷೆ, ಸೆ.07 ಹಾಗೂ ಅಕ್ಟೋಬರ್ 04 ರಂದು ನಡೆಸಲು ನಿಗದಿಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read