HomeKarnatakaಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಖಾಲಿ ಹುದ್ದೆಗಳಿಗೆ KPSC ಅರ್ಜಿ ಆಹ್ವಾನ

ಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಖಾಲಿ ಹುದ್ದೆಗಳಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಪಶು ಸಂಗೋಪನಾ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ ಗ್ರೂಪ್ ಎ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಗಸ್ಟ್ 12 ರಿಂದ ಸೆಪ್ಟಂಬರ್ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ(ಬಿ.ವಿ.ಎಸ್ಸಿ) ಮತ್ತು ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ವೈದ್ಯಕೀಯ ಸಂಶೋಧನೆ(ಬಿ.ವಿ.ಎಸ್ಸಿ ಮತ್ತು ಎಹೆಚ್) ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ ಮೊದಲಾದವುಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್ಸಿ ವೆಬ್ಸೈಟ್ ಗಮನಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular