HomeJobsಗೆಜೆಟೆಡ್ ಪ್ರೊಬೇಷನರ್ 319 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಗೆಜೆಟೆಡ್ ಪ್ರೊಬೇಷನರ್ 319 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಿದೆ.

ತಿದ್ದುಪಡಿ ಅಧಿಸೂಚನೆ

2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 (ಉಳಿಕೆ ಮೂಲ ವೃಂದ 297 + ಹೈದ್ರಾಬಾದ್-ಕರ್ನಾಟಕ ವೃಂದ 22) ಹುದ್ದೆಗಳನ್ನು ಭರ್ತಿ ಮಾಡಲು ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ONLINE ಮುಖಾಂತರ ಅರ್ಜಿಯನ್ನು ಆಹ್ವಾನಿಸಲು ದಿನಾಂಕ:31-07-2026ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ:01-08-2026 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-08-2026 ಆಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಕೆಲವು ಅಭ್ಯರ್ಥಿಗಳು ಜಾತಿ ಆದಾಯ ಮತ್ತು ಒಳ ಮೀಸಲಾತಿ ಪ್ರಮಾಣ ಪತ್ರಗಳ ವಿತರಣೆಗೆ ಸಂಬಂಧಿಸಿದಂತೆ ನಾಡಕಛೇರಿ ಮತ್ತು ಸೇವಾ ಸಿಂಧು ಪೋರ್ಟಲ್ ಸರ್ವರ್ ಸಮಸ್ಯೆಯಿಂದಾಗಿ ನಿಗದಿತ ಸಮಯಕ್ಕೆ ಪ್ರಮಾಣ ಪತ್ರಗಳು ದೊರೆಯುತ್ತಿಲ್ಲ ಹಾಗೂ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಇಂಟರ್‌ನೆಟ್ ಸಂಪರ್ಕದ ಕೊರತೆಯಿಂದಾಗಿ ಶುಲ್ಕ ಪಾವತಿ ವೈಫಲ್ಯದ ಕಾರಣಗಳನ್ನು ನಮೂದಿಸುತ್ತಾ ONLINE ಮುಖಾಂತರ ಅರ್ಜಿ ಸಲ್ಲಿಸಲು ಸಾಧ್ಯವಾಗದ ಕಾರಣ ನಿಗದಿಪಡಿಸಲಾಗಿರುವ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಕೋರಿರುತ್ತಾರೆ.

ಮೇಲ್ಕಂಡ ಮನವಿಗಳನ್ನು ಪರಿಶೀಲಿಸಿ, ಅಭ್ಯರ್ಥಿಗಳ ಹಿತದೃಷ್ಟಿಯಿಂದ ONLINE ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ೦7 -09-2026ರವರೆಗೆ ವಿಸ್ತರಿಸಿದೆ. ಇನ್ನುಳಿದಂತೆ ದಿನಾಂಕ:31-07-2026ರ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular