ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ಆತನ ಮನೆಯನ್ನ ಸೀಜ್ ಮಾಡಲಾಗಿದೆ.
ಬಾಲ್ಕಿ ಮೂಲದ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಮೂಲಕವೇ ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಡಿಲ್ ಗಳು ನಡೆಯುತ್ತಿದ್ದವು. ಈತ ಮಧ್ಯವರ್ತಿಯಾಗಿ ಕೆಲಸ ಮಾಅಡುತ್ತಿದ್ದ ಎನ್ನಲಾಗಿದ್ದು, ಇದೇ ಆರೋಪದಲ್ಲಿ ಬಸವರಾಜ್ ಕಿನ್ನಾಳೆಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಬಂಧನದ ಬಳಿಕ ಸಿಐಡಿ ಅಧಿಕಾರಿಗಳು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಬೆಂಗಳೂರಿನ ಸಂಜಯ್ ನಗರದ ವಿನಾಯಕ ಲೇಔಟ್ ನಲ್ಲಿರುವ ಬಸವರಾಜ್ ಕನ್ನಾಳೆ ಮುನೆಯನ್ನ ಸರ್ಚ್ ಮಾಡಿದ್ದಾರೆ. ಇದೇ ಮನೆಯಲ್ಲಿ ಡೀಲ್ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಮನೆ ಶೋಧ ನಡೆಸಿರೋ ಸಿಐಡಿ ಅಧಿಕಾರಿಗಳು ಮನೆ ಸರ್ಚ್ ಮುಗಿದ ಬಳಿಕ ಸೀಜ್ ಮಾಡಿ ತನ್ನ ಕಂಟ್ರೋಲ್‌ಗೆ ಪಡೆದಿದ್ದಾರೆ. ಕೆಲವು ಅಭ್ಯರ್ಥಿಗಳ ಜೊತೆ ಮಾತುಕತೆ ಆಗಿರುವ ಬಗ್ಗೆ ಸಿಐಡಿಗೆ ಮಾಹಿತಿ ಸಿಕ್ಕಿರುವ ಕಾರಣ ಬಸವರಾಜ್ ಮನೆಯಲ್ಲಿರುವ ಸಿಸಿಟಿವಿ ಡಿವಿಆರ್ ಕೂಡ ವಶಕ್ಕೆ ಪಡೆದುಕೊಂಡು ಹೆಚ್ಚಿನ ತನಿಖೆ ಮುಂದಾಗಿದ್ದಾರೆ.
ಕೆಪಿಎಸ್‌ಸಿ ಅಕ್ರಮ: ಒಂದು ಹುದ್ದೆ 40 ಲಕ್ಷ ರೂ.ಗೆ ಡೀಲ್:
ಕೆಪಿಎಸ್‌ಸಿಯಲ್ಲಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಶುತ್ತಿರುವ ಸಿಐಡಿ ಅಧಿಕಾರಿಗ ಮುಂದೆ ಆರು ಅಭ್ಯರ್ಥಿಗಳು ತಪ್ಪೊಪ್ಪಿಕೊಂಡಿದ್ದು, ಸ್ಫೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ.
ಸಿಐಡಿ ತನಿಖೆಯ ವೇಳೆ ಸುಹೇಲ್ ಸೇರಿದಂತೆ ಒಟ್ಟು 6 ಜನ ಅಭ್ಯರ್ಥಿಗಳು ಹಣ ನೀಡಿ ಅಕ್ರಮವಾಗಿ ಪರೀಕ್ಷೆ ಬರೆದಿರುವುದಾಗಿ ಹೇಳಿಕೆ ನೀಡಿದ್ದಾರೆ. ಸುಮಾರು 400 ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ, ಒಂದು ಹುದ್ದೆಗೆ ಬರೋಬ್ಬರಿ 40 ಲಕ್ಷ ರೂಪಾಯಿಗೆ ಡೀಲ್ ಕುದುರಿಸಲಾಗಿತ್ತು ಎಂದು ಅಭ್ಯರ್ಥಿ ಮೊಹಮ್ಮದ್ ಸುಹೇಲ್ ಬಾಯ್ಬಿಟ್ತಿದ್ದಾನೆ.
ಬೆಂಗಳೂರಿನ ರಾಜಾಜಿನಗರದಲ್ಲಿದ್ದ ಕಚೇರಿಯೊಂದರಲ್ಲಿ ಈ ಡೀಲ್ ನಡೆದಿದ್ದು, ವಾಟ್ಸಾಪ್ ಮೂಲಕ ವ್ಯವಹಾರ ನಡೆಸಿ ಮುಂಗಡವಾಗಿ 20 ಲಕ್ಷ ರೂ. ಹಣ ಪಾವತಿಸಲಾಗಿತ್ತು ಎಂದು ಸಿಐಡಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ.
ಪರೀಕ್ಷೆಗೂ ಮುಂಚೆಯೇ ಅಭ್ಯರ್ಥಿಗಳ ಕೈಗೆ ಪ್ರಶ್ನೆಪತ್ರಿಕೆ ತಲುಪಿತ್ತು. ಅಭ್ಯರ್ಥಿಗಳು ಸಾಮಾನ್ಯ ಪರೀಕ್ಷಾ ಕೇಂದ್ರಗಳ ಬದಲಾಗಿ ಬೆಂಗಳೂರಿನ ರೆಸಾರ್ಟ್, ತುಮಕೂರಿನ ದೇವರಾಯನದುರ್ಗ ಹಾಗೂ ಆಂಧ್ರಪ್ರದೇಶದ ರೆಸಾರ್ಟ್‌ಗಳಲ್ಲಿ ಕುಳಿತು ಪರೀಕ್ಷೆ ಬರೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಈ ಸಮಗ್ರ ಅಕ್ರಮ ಜಾಲದಲ್ಲಿ ಮಧ್ಯವರ್ತಿ ಬಸವರಾಜ್ ಕನ್ನಾಳೆ ಸೇರಿದಂತೆ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಅಭ್ಯರ್ಥಿಗಳು ಸಿಐಡಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಈ ನಡುವೆ ಸಿಐಡಿಯಿಂದ ಬಂಧಿಸಲ್ಪಟ್ಟಿರುವ ಬಸವರಾಜ್ ಕಿನ್ನಾಳೆ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳುರಿನ ಸಂಜಯ್ ನಗರದಲ್ಲಿರುವ ಬಸವರಾಜ್ ಕಿನ್ನಾಳೆ ಮನೆಯನ್ನು ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ಅಧಿಕಾರಿಗಳು ಸೀಜ್ ಮಾಡಿದ್ದು, ಇದೇ ಮನೆಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಡೀಲ್ ಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ.

