ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆ.ಪಿ.ಎಸ್.ಸಿ.) 2026 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಮೇ 9 ರಿಂದ 31 ರವರೆಗೆ ಎಲ್ಲಾ ಜಿಲ್ಲಾ, ವಿಭಾಗೀಯ ಮತ್ತು ಬೆಂಗಳೂರು ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಿದ್ದ ಪರೀಕ್ಷೆಗಳನ್ನು ಮುಂದೂಡಿದೆ.
ಪ್ರಸ್ತುತ ರಾಜ್ಯಾದ್ಯಂತ 2027ರ ಜನಗಣತಿ ಕಾರ್ಯ ನಡೆಯುತ್ತಿದೆ. ಜನಗಣತಿ ಕಾರ್ಯಕ್ಕೆ ಸರ್ಕಾರಿ ಅಧಿಕಾರಿಗಳು, ನೌಕರರನ್ನು ನಿಯೋಜಿಸಲಾಗಿದೆ. ಇಲಾಖಾ ಪರೀಕ್ಷೆಗಳನ್ನು ನಡೆಸುವಂತಹ ಶಾಲಾ-ಕಾಲೇಜುಗಳ ಅಧಿಕಾರಿ, ಸಿಬ್ಬಂದಿಗಳನ್ನು ಕೂಡ ಜನಗಣತಿ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇಲಾಖಾ ಪರೀಕ್ಷೆಗಳನ್ನು ಬರೆಯುವಂತಹ ಅಭ್ಯರ್ಥಿಗಳು ಕೂಡ ಸರ್ಕಾರಿ ಅಧಿಕಾರಿಗಳು, ನೌಕರರಾಗಿದ್ದು, ಹೀಗಾಗಿ ಪರೀಕ್ಷೆಯನ್ನು ಬರೆಯುವ ಅಭ್ಯರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ನಂತರದಲ್ಲಿ ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

