ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ಬಳ್ಳಾರಿ 01 ಪರೀಕ್ಷಾ ಕೇಂದ್ರದಲ್ಲಿ ಸೆ.06 ರಂದು ಮಧ್ಯಾಹ್ನ 02 ರಿಂದ ಸಂಜೆರ 04 ರ ವರೆಗೆ ಹೈದರಾಬಾದ್ ಕರ್ನಾಟಕ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸೆ.07 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಮತ್ತು ಮಧ್ಯಾಹ್ನ 02 ರಿಂದ ಸಂಜೆ 04 ರ ವರೆಗೆ ನಿರ್ದಿಷ್ಟ ಪತ್ರಿಕೆ-2 ಸ್ಪರ್ಧಾತ್ಮಕ ಪರೀಕ್ಷೆಗಳು 02 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್, ಇಂಟರ್ನೆಟ್ ಸೆಂಟರ್ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.