ನಾಳೆಯಿಂದ ‘KPSC’ ಇಲಾಖಾ ಪರೀಕ್ಷೆ ; ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗದಿಂದ 2024 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜ್ ಅವರು ಮಾಹಿತಿ ನೀಡಿದರು.

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗಳಿಗೆ ನಡೆಸಲಾಗುವ ಇಲಾಖಾ ಪರೀಕ್ಷೆಗಳು ಇದಾಗಿದ್ದು, ವೇಳಾಪಟ್ಟಿ ಸಮಯ ಪ್ರತಿ ಪತ್ರಿಕೆಗಳಿಗೂ ಬೇರೆ ಬೇರೆ ಇರುತ್ತದೆ. ದಿನಾಂಕ 07-06-2024 ರಿಂದ 09-06-2024 ಮತ್ತು 11-06-2024 ರಿಂದ 23-06-2024 ರವರೆಗೆ (10-06-2024 ಮತ್ತು 15-06-2024 ರಿಂದ 18-06-2024 ದಿನಗಳನ್ನು ಹೊರತುಪಡಿಸಿ) ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಮೇಲ್ವಿಚಾರಣೆಗಾಗಿ 2 ಜನ ವೀಕ್ಷಕರನ್ನು, ಮಾರ್ಗಾಧಿಕಾರಿಗಳು, ಸ್ಥಳೀಯ ನಿರೀಕ್ಷಣಾದಿಕಾರಿ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ವಿಶೇಷ ಚೇತನರಿಗೆ, ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಕೆಪಿಎಸ್ಸಿ ನಿಯಮಾನುಸಾರ ಪರೀಕ್ಷೆ ನಡೆಸಲಾಗುವುದು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿ ಆದೇಶಿಸಲಾಗಿದೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಹಾಗೂ ಇತರೆ ಡಿಜಿಟಲ್ ಸಾಧನಗಳಿಗೆ ಅವಕಾಶವಿರುವುದಿಲ್ಲ. ಪೋಲಿಸ್ ಸಿಬ್ಬಂದಿಗಳು, ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಪರೀಕ್ಷೆಗಳು ಶಾಂತಯುತವಾಗಿ ನಡೆಯಲು ಅನುವಾಗುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಳು ಮತ್ತು ಹಾಗೂ ಸಿಬ್ಬಂದಿಗಳು ಎಚ್ವರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಶಿವಕುಮಾರ್, ಡಿಹೆಚ್ಓ ಡಾ.ನಟರಾಜ್ ಹಾಗೂ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಉಪಸ್ಥಿತರಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read