HomeKarnatakaBREAKING NEWS: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ KPSC ಮತ್ತೆ ಶಾಕ್: ಕೊನೆ ಕ್ಷಣದಲ್ಲಿ ಗ್ರೂಪ್ -ಬಿ ಪರೀಕ್ಷೆ...

BREAKING NEWS: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ KPSC ಮತ್ತೆ ಶಾಕ್: ಕೊನೆ ಕ್ಷಣದಲ್ಲಿ ಗ್ರೂಪ್ -ಬಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಮತ್ತೆ ಶಾಕ್  ನೀಡಿದೆ.

ಕೊನೆ ಕ್ಷಣದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ -ಬಿ ಪರೀಕ್ಷೆಯನ್ನು ಮುಂದೂಡಿದೆ.

ದಿನಾಂಕ 14-09-2024 ಮತ್ತು 15-09-2024 ರ ಪರೀಕ್ಷೆಗಳ ಮುಂದೂಡಿಕೆಗೆ ಸಂಬಂಧಿಸಿದಂತೆ 13-03-2024 ರ ಅಧಿಸೂಚನೆಗಾಗಿ ಪತ್ರಿಕಾ ಟಿಪ್ಪಣಿಯನ್ನು ಪ್ರಕಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು.

ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ ಎಂದು ತಿಳಿಸಲಾಗಿರುತ್ತದೆ.

ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ದಿ:13-03-2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿರುತ್ತದೆ.

ಆದ್ದರಿಂದ ದಿನಾಂಕ:14-09-2024 ರ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ: 15-09-2024ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.

ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular