HomeKarnataka319 ಗ್ರೂಪ್ ಎ, ಬಿ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ

319 ಗ್ರೂಪ್ ಎ, ಬಿ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶವನ್ನು ಸೆಪ್ಟೆಂಬರ್‌ 7ರವರೆಗೆ ವಿಸ್ತರಿಸಲಾಗಿದೆ. ತಾಂತ್ರಿಕ ದೋಷಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.

ಒಟ್ಟು 319 ಗ್ರೂಪ್‌ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಭರ್ತಿಗೆ ಇದು ಸುವರ್ಣಾವಕಾಶವಾಗಿದ್ದು, ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಅಗತ್ಯ ದಾಖಲೆಗಳೊಂದಿಗೆ ಈಗಲೇ ಅರ್ಜಿ ಸಲ್ಲಿಸಿ.

319 ಗ್ರೂಪ್ ಎ, ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ KPSC ಗುಡ್ ನ್ಯೂಸ್ ಕೊಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಲೋಕಸೇವಾ ಆಯೋಗವು (KPSC) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಒಟ್ಟು 319 ಹುದ್ದೆಗಳ ಅರ್ಜಿ ದಿನಾಂಕವನ್ನು ವಿಸ್ತರಿಸಿದೆ. 

ಹೊಸ ದಿನಾಂಕ: ಈ ಮೊದಲು ಆಗಸ್ಟ್ 31, 2026 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಹೊಸ ಕೊನೆಯ ದಿನಾಂಕ ಸೆಪ್ಟೆಂಬರ್ 7, 2026

ಆಯೋಗಕ್ಕೆ ಅನೇಕ ಅಭ್ಯರ್ಥಿಗಳು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಲಾಗಿದೆ. ನಾಡಕಚೇರಿ ಮತ್ತು ಸೇವಾ ಸಿಂಧು ಪೋರ್ಟಲ್ ಸರ್ವರ್ ಸಮಸ್ಯೆ – ಜಾತಿ, ಆದಾಯ ಮತ್ತು ಒಳ ಮೀಸಲಾತಿ ಪ್ರಮಾಣಪತ್ರಗಳು ಸಮಯಕ್ಕೆ ಸಿಗಲಿಲ್ಲ. ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಇಂಟರ್ನೆಟ್ ಸಮಸ್ಯೆಯಿಂದ ಆನ್‌ಲೈನ್ ಶುಲ್ಕ ಪಾವತಿಯಲ್ಲಿ ವೈಫಲ್ಯ ಸೇರಿ ಈ ಎಲ್ಲಾ ಸಮಸ್ಯೆಗಳನ್ನು ಪರಿಗಣಿಸಿ ಸೆಪ್ಟೆಂಬರ್ 7 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಹುದ್ದೆಗಳ ವಿವರ:

ಒಟ್ಟು 319 ಹುದ್ದೆಗಳು

ಉಳಿಕೆ ಮೂಲ ವೃಂದ: 297, ಕಲ್ಯಾಣ ಕರ್ನಾಟಕ / ಹೈದ್ರಾಬಾದ್-ಕರ್ನಾಟಕ ವೃಂದ: 22  

ಈ ಹುದ್ದೆಗಳಿಗೆ ಜುಲೈ 31, 2026 ರಂದು ಮೂಲ ಅಧಿಸೂಚನೆ ಹೊರಡಿಸಲಾಗಿತ್ತು, ಆಗಸ್ಟ್ 1 ರಿಂದ ಅರ್ಜಿ ಪ್ರಕ್ರಿಯೆ ಶುರುವಾಗಿತ್ತು.

ದಿನಾಂಕ ವಿಸ್ತರಣೆ ಹೊರತುಪಡಿಸಿ ಉಳಿದ ಎಲ್ಲಾ ಷರತ್ತುಗಳು, ಅರ್ಹತೆ, ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ.  ನೀವು ಇನ್ನೂ ಅರ್ಜಿ ಹಾಕಿಲ್ಲ ಅಂದ್ರೆ, kpsc.kar.nic.in ಅಧಿಕೃತ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್ 7 ರೊಳಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿ

ಒಟ್ಟು 319 ಹುದ್ದೆಗಳಲ್ಲಿ ಗ್ರೂಪ್ ‘ಎ’ – 117, ಗ್ರೂಪ್ ‘ಬಿ’ – 202 ಹುದ್ದೆಗಳಾಗಿವೆ.

ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Degree) ಹೊಂದಿರಬೇಕು.

ವಯೋಮಿತಿ ಕನಿಷ್ಠ ವಯಸ್ಸು: 21 ವರ್ಷ

ಗರಿಷ್ಠ ವಯೋಮಿತಿ:

ಸಾಮಾನ್ಯ ವರ್ಗ (GM): 40 ವರ್ಷ

ಪ್ರವರ್ಗ 2A, 2B, 3A, 3B: 43 ವರ್ಷ

SC / ST / ಪ್ರವರ್ಗ-1: 45 ವರ್ಷ

ಅರ್ಜಿ ಶುಲ್ಕ

ಸಾಮಾನ್ಯ ವರ್ಗ: ₹600

ಪ್ರವರ್ಗ 2A, 2B, 3A, 3B: ₹300

ಮಾಜಿ ಸೈನಿಕರು: ₹50

SC / ST / ಪ್ರವರ್ಗ-1 / ಅಂಗವಿಕಲರು: ಶುಲ್ಕ ವಿನಾಯಿತಿ

ಅರ್ಜಿ ಸಲ್ಲಿಸುವ ವಿಧಾನ

KPSC ಯ ಅಧಿಕೃತ ವೆಬ್‌ಸೈಟ್‌ kpsconline.karnataka.gov.in ಗೆ ಭೇಟಿ ನೀಡಿ.

One Time Registration (OTR) ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಲಾಗಿನ್ ಆಗಿ ನಿಮ್ಮ ವೈಯಕ್ತಿಕ, ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು (ಫೋಟೋ, ಸಹಿ, ಪ್ರಮಾಣಪತ್ರ) ಅಪ್‌ಲೋಡ್ ಮಾಡಿ.

ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿ.

ನೇಮಕಾತಿಯ ನಿರ್ದಿಷ್ಟ ಹುದ್ದೆಗಳ ಹಂಚಿಕೆ ಅಥವಾ ಪರೀಕ್ಷಾ ಪಠ್ಯಕ್ರಮದ ಕುರಿತು ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ ಗಮನಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular