ಇಂದಿನಿಂದ ʻKPSCʼ ಗ್ರೂಪ್ ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :ಡಿಸೆಂಬರ್ 16 ರ ಇಂದು 17 ರ ನಾಳೆ ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತ್ತು ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‍ಗಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾರ್ಥಿಗಳಿಗೆ ವಿತರಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರು ಮೊಬೈಲ್ ಬಳಸಬಾರದು ಎಂದು ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read