HomeKarnataka384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ದಿನಾಂಕ ಫಿಕ್ಸ್

384 ಕೆಎಎಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ದಿನಾಂಕ ಫಿಕ್ಸ್

ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿದೆ.

ಡಿಸೆಂಬರ್ 29ರಂದು ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಆ. 27ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗಿತ್ತು. ಆದರೆ ಪ್ರಶ್ನೆ ಪತ್ರಿಕೆಗಳಲ್ಲಿ ಹಲವು ತಪ್ಪುಗಳು ಕಂಡುಬಂದಿದ್ದರಿಂದ ಅಭ್ಯರ್ಥಿಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಪರ ಸಂಘಟನೆಗಳು ಕೂಡ ಮರು ಪರೀಕ್ಷೆಗೆ ಒತ್ತಾಯಿಸಿದ್ದವು.

ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ತಿಂಗಳ ಒಳಗೆ ಮರು ಪರೀಕ್ಷೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೂಚನೆ ನೀಡಿದ್ದು, ಅಂತಿಮವಾಗಿ ದಿನಾಂಕ ನಿಗದಿಪಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023-24ನೇ ಸಾಲಿನ ಗೆಜ಼ೆಟೆಡ್‌ ಪ್ರೊಬೆಷನರ್ಸ್‌ ಗ್ರೂಪ್‌-ಎ ಮತ್ತು ಗ್ರೂಪ್‌-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿ:29.12.2024ರಂದು ನಡೆಸಲು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸದರಿ ಪರೀಕ್ಷೆಗೆ ಎಲ್ಲಾ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿರುತ್ತದೆ.

ಸದರಿ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿ ಆಗದಿರುವ ಕುರಿತು ಪರಿಶೀಲಿಸಲಾಗಿದೆ. ಈ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲ್ಲಿ ಅದಕ್ಕೆ ಆಯೋಗ ಹೊಣೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡುವುದಿಲ್ಲ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ. ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular