ತಡೆಯಾಜ್ಞೆ ತೆರವು: ಕೆಎಎಸ್ ಮರು ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ: ನಿಗದಿಯಂತೆ ಡಿ. 29 ರಂದು ಎಕ್ಸಾಂ

ಧಾರವಾಡ: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗದ ಆದೇಶಕ್ಕೆ ನೀಡಿದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲಾಗಿದ್ದು ಕೆಎಎಸ್ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಒಪ್ಪಿಗೆ ನೀಡಿದೆ.

ಇದರಿಂದಾಗಿ ಡಿ. 29ರಂದು ನಿಗದಿಯಾಗಿರುವಂತೆ ಮರು ಪರೀಕ್ಷೆ ನಡೆಸಲು ಕರ್ನಾಟ ಲೋಕಸೇವಾ ಆಯೋಗಕ್ಕೆ ಹಾದಿ ಸುಗಮವಾಗಿದೆ. ಧಾರವಾಡದ ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯರೂರ ಅವರಿದ್ದ ಏಕ ಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿದೆ. ಈ ಕುರಿತಾಗಿ ಅರ್ಜಿದಾರರು ಬಯಸಿದರೆ ಕರ್ನಾಟಕ ಆಡಳಿತಾತ್ಮಕ ಮಂಡಳಿ(ಕೆಎಟಿ) ಮೊರೆ ಹೋಗಬಹುದು ಎಂದು ಅಭಿಪ್ರಾಯಪಟ್ಟಿದೆ.

2023- 24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಗಸ್ಟ್ 27ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗಿತ್ತು. ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರಿಸಿದ ಪ್ರಶ್ನೆಗಳಲ್ಲಿ ಹಲವು ತಪ್ಪುಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ಅಭ್ಯರ್ಥಿಗಳು ಸಿಎಂಗೆ ಮನವಿ ಮಾಡಿದ್ದರು. ಮರು ಪರೀಕ್ಷೆಗೆ ಸಿಎಂ ಆದೇಶಿಸಿದ್ದರು. ಡಿಸೆಂಬರ್ 29ರಂದು ಕೆಪಿಎಸ್ಸಿ ಮರು ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದ್ದು, ಆದರೆ ಪರೀಕ್ಷೆಯನ್ನು ಹೊಸದಾಗಿ ನಡೆಸುವ ಆದೇಶ ಸರಿಯಲ್ಲ ಎಂದು ಕೆಲವರು ಕೋರ್ಟ್ ಮೊರೆ ಹೋಗಿದ್ದರಿಂದ ಮಧ್ಯಂತರ ತಡೆ ನೀಡಿದ್ದು, ಇದೀಗ ತಡೆಯಾಜ್ಞೆ ತೆರವುಗೊಂಡಿದ್ದು, ಡಿಸೆಂಬರ್ 29 ರಂದು ಮರು ಪರೀಕ್ಷೆ ನಡೆಸಲು ಹಾದಿ ಸುಗಮವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read