HomeKarnatakaFDA, SDA ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: KPSC ಯಿಂದ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ

FDA, SDA ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: KPSC ಯಿಂದ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ FDA(RPC)2019 ರ ಹುದ್ದೆಗೆ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.

ತಿದ್ದುಪಡಿ ನಿಯಮಗಳನ್ವಯ ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 15 ಇಲಾಖೆಗಳಿಂದ ಪ್ರಸ್ತಾವನೆ ಸ್ವೀಕೃತವಾಗಿದ್ದು, ನಿಯಮಾನುಸಾರ ಶೇ.30ರ ವರ್ಗೀಕರಣಕ್ಕೆ ಸೀಮಿತಗೊಳಿಸಿ, ಪ್ರಸ್ತಾವನೆಗಳು ಸ್ವೀಕೃತವಾದ ಕಾಲಾನುಕ್ರಮದನುಸಾರ 34 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ, ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.

ಉಳಿಕೆ ಮೂಲ ವೃಂದದ 06 ವಿವಿಧ ಇಲಾಖೆಗಳಿಂದ ಹೆಚ್ಚುವರಿ ಆಯ್ಕೆಪಟ್ಟಿಗಾಗಿ ಪ್ರಸ್ತಾವನೆಗಳು ಸ್ವೀಕೃತವಾಗಿದ್ದು, ನಿಯಮಾನುಸಾರ ಶೇಕಡ 30ರ ವರ್ಗೀಕರಣಕ್ಕೆ ಸೀಮಿತಗೊಳಿಸಿ, ಪ್ರಸ್ತಾವನೆಗಳು ಸ್ವೀಕೃತವಾದ ಕಾಲಾನುಕ್ರಮಣಿಕೆಯನುಸಾರ ಉಳಿಕೆ ಮೂಲ ವೃಂದದ 06 ವಿವಿಧ ಇಲಾಖೆಗಳಿಗೆ 65 ಸಹಾಯಕರು/ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ, ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2ನೇ ಹೆಚ್ಚುವರಿ ಆಯ್ಕೆಪಟ್ಟಿಯು ಉಚ್ಚ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

https://www.facebook.com/photo/?fbid=3828375697380588&set=pcb.1978693265896358

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular