HomeKarnataka384 KAS ಹುದ್ದೆ ನೇಮಕಾತಿ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 5 ಪ್ರಶ್ನೆಗಳಿಗೆ ಕೃಪಾಂಕ

384 KAS ಹುದ್ದೆ ನೇಮಕಾತಿ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 5 ಪ್ರಶ್ನೆಗಳಿಗೆ ಕೃಪಾಂಕ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರು ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಗುರುವಾರ ಪ್ರಕಟಿಸಿದೆ.

ಡಿಸೆಂಬರ್ 29ರಂದು ಪೂರ್ವಭಾವಿ ಮರು ಪರೀಕ್ಷೆ ನಡೆದಿತ್ತು. ಒಟ್ಟು 5 ಪ್ರಶ್ನೆಗಳಿಗೆ ಒಟ್ಟು 10 ಕೃಪಾಂಕಗಳನ್ನು ನೀಡಲು ನಿರ್ಧರಿಸಲಾಗಿದೆ. ಪ್ರಶ್ನೆ ಪತ್ರಿಕೆ 1 ಮತ್ತು 2 ಸೇರಿ 13 ಪ್ರಶ್ನೆಗಳ ಸರಿ ಉತ್ತರಗಳಲ್ಲಿ ಬದಲಾವಣೆಯಾಗಿದೆ. ಪತ್ರಿಕೆ 1ರಲ್ಲಿ ಒಟ್ಟು 7 ಪ್ರಶ್ನೆಗಳಿಗೆ ಸರಿ ಉತ್ತರ ಬದಲಾವಣೆಯಾಗಿದ್ದು, ಇವುಗಳ ಪೈಕಿ 4 ಉತ್ತರಗಳನ್ನು ಪರಿಷ್ಕರಿಸಲಾಗಿದೆ. 3 ಪ್ರಶ್ನೆಗಳಿಗೆ ನೀಡಿದ 4 ಆಯ್ಕೆಗಳು ಸರಿ ಇಲ್ಲದೆ ಇದ್ದ ಕಾರಣ ಆ ಪ್ರಶ್ನೆಗಳಿಗೆ ಕೃಪಾಂಕ ನೀಡಲು ನಿರ್ಧರಿಸಲಾಗಿದೆ.

ಪ್ರಶ್ನೆ ಪತ್ರಿಕೆ 2ರಲ್ಲಿ 6 ಪ್ರಶ್ನೆಗಳ ಸರಿ ಉತ್ತರ ಬದಲಾಗಿದ್ದು, ಇವುಗಳಲ್ಲಿ ನಾಲ್ಕು ಸರಿ ಉತ್ತರಗಳನ್ನು ಪರಿಷ್ಕರಿಸಲಾಗಿದೆ. ಎರಡು ಪ್ರಶ್ನೆಗಳಿಗೆ ನೀಡಿದ 4 ಆಯ್ಕೆಗಳು ಸರಿ ಇಲ್ಲದೆ ಇದ್ದ ಕಾರಣ ಆ ಪ್ರಶ್ನೆಗಳಿಗೆ ಕೃಪಾಂಕ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಪರಿಷ್ಕೃತ ಸರಿ ಉತ್ತರ ಪ್ರಕಟಿಸಿದ ಬಳಿಕ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸುವ ಯಾವುದೇ ಆಕ್ಷೇಪಣೆ ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular