ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಬಿ ವೃಂದದ ಹುದ್ದೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಪ್ರಕಟಿಸಿದ್ದ ವ್ಯಕ್ತಿತ್ವ ಪರೀಕ್ಷೆಯ ವೇಳಾಪಟ್ಟಿಯನ್ನು ತಾಂತ್ರಿಕ ಕಾರಣಗಳಿಂದಾಗಿ ಹಿಂಪಡೆದಿದೆ.
ವ್ಯಕ್ತಿತ್ವ ಪರೀಕ್ಷೆ: ಒಟ್ಟು 384 ಹುದ್ದೆಗಳಿಗೆ (310 RPC + 74 HK) 1:3 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ವ್ಯಕ್ತಿತ್ವ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಮಾರ್ಚ್ 23, 2026 ರಿಂದ ಮೇ 4, 2026 ರವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು.
ಯಾಕೆ ಹಿಂಪಡೆಯಲಾಗಿದೆ ? : ಆಡಳಿತಾತ್ಮಕ ಕಾರಣಗಳಿಂದಾಗಿ ಮಾರ್ಚ್ 10, 2026 ರಂದು ಪ್ರಕಟಿಸಲಾಗಿದ್ದ ವೇಳಾಪಟ್ಟಿಯನ್ನು ಆಯೋಗವು ವಾಪಸ್ ಪಡೆದಿದೆ.
ಮುಂದಿನ ಕ್ರಮ : ಪರಿಷ್ಕೃತ ವ್ಯಕ್ತಿತ್ವ ಪರೀಕ್ಷೆಯ ದಿನಾಂಕ ಮತ್ತು ಸಮಯದ ಮಾಹಿತಿಯನ್ನು ಶೀಘ್ರದಲ್ಲೇ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿಗಳು ತಿಳಿಸಿದ್ದಾರೆ.


