HomeKarnatakaಕೆಪಿಎಸ್‌ಸಿ ಹಗರಣ: 329 ಅಭ್ಯರ್ಥಿಗಳಿಗೆ ಇಂದೇ ವಿಚಾರಣೆಗೆ ಹಾಜರಾಗಲು ಸಿಐಡಿ ನೋಟಿಸ್

ಕೆಪಿಎಸ್‌ಸಿ ಹಗರಣ: 329 ಅಭ್ಯರ್ಥಿಗಳಿಗೆ ಇಂದೇ ವಿಚಾರಣೆಗೆ ಹಾಜರಾಗಲು ಸಿಐಡಿ ನೋಟಿಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ನಡೆಸಿರುವ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು 329 ಅಭ್ಯರ್ಥಿಗಳಿಗೆ ದಿಢೀರ್ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಜಾರಿ ನಿರ್ದೇಶನಾಲಯದ (ED) ಮುಂದೆ ಕೆಲವರು ಅಕ್ರಮ ನಡೆಸಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಸಿಐಡಿ ಈ ಮಹತ್ವದ ಕ್ರಮ ಕೈಗೊಂಡಿದೆ. ನೋಟಿಸ್ ಪಡೆದಿರುವ ಎಲ್ಲಾ 329 ಅಭ್ಯರ್ಥಿಗಳು ಇಂದೇ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇಡಿ ನಡೆಸಿದ ಪ್ರತ್ಯೇಕ ವಿಚಾರಣೆ ವೇಳೆ ಲಭ್ಯವಾದ ಮಹತ್ವದ ಮಾಹಿತಿ ಮತ್ತು ತಪ್ಪೊಪ್ಪಿಗೆ ಹೇಳಿಕೆಗಳನ್ನು ಆಧರಿಸಿ ಸಿಐಡಿ ಅಧಿಕಾರಿಗಳು ಮತ್ತಷ್ಟು ಆಳವಾದ ತನಿಖೆಗೆ ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಷ್ಟೊಂದು ದೊಡ್ಡ ಸಂಖ್ಯೆಯ ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ನೋಟಿಸ್ ನೀಡಿರುವುದು ಪ್ರಕರಣದಲ್ಲಿ ಸಂಚಲನ ಮೂಡಿಸಿದ್ದು, ಅಕ್ರಮದಲ್ಲಿ ಭಾಗಿಯಾದ ಪ್ರಭಾವಿಗಳಿಗೂ ತನಿಖೆಯ ಬಿಸಿ ತಟ್ಟುವ ಸಾಧ್ಯತೆಯಿದೆ.

ಈಗಾಗಲೇ 329 ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ 658 ಓಎಂಆರ್ ಕಾರ್ಬನ್ ಶೀಟ್‍ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(FSL) ರವಾನಿಸಲಾಗಿದೆ. ಓಎಂಆರ್ ಶೀಟ್‍ಗಳೊಂದಿಗೆ ಕಾರ್ಬನ್ ಶೀಟ್‍ಗಳನ್ನು ತಾಳೆ ಹಾಕಿ ಪರಿಶೀಲಿಸುವ ಉದ್ದೇಶದಿಂದ ಅವುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ.

ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ಅಭ್ಯರ್ಥಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದು, ಮತ್ತಷ್ಟು ಸ್ಫೋಟಕ ಸತ್ಯಗಳು ಹೊರಬೀಳುವ ಸಾಧ್ಯತೆಗಳಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular