HomeKarnatakaಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: KPSC ಮಾಜಿ ಅಧ್ಯಕ್ಷ, ಆಯ್ಕೆಯಾದ ಅಭ್ಯರ್ಥಿಗಳ ಮನೆ ಸೇರಿ 21 ಸ್ಥಳಗಳ...

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: KPSC ಮಾಜಿ ಅಧ್ಯಕ್ಷ, ಆಯ್ಕೆಯಾದ ಅಭ್ಯರ್ಥಿಗಳ ಮನೆ ಸೇರಿ 21 ಸ್ಥಳಗಳ ಮೇಲೆ ED ದಾಳಿ

ಬೆಂಗಳೂರು: ಕೆಪಿಎಸ್ ಸಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ- ಇಡಿ ಅಧಿಕಾರಿಗಳು ಇಂದು ಮೆಗಾ ರೇಡ್ ನಡೆಸಿದ್ದಾರೆ. ಕೆಪಿಎಸ್ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸ, ಕೆಪಿಎಸ್ ಸಿ ಸದಸ್ಯರು, ಮಧ್ಯವರ್ತಿಗಳು, ಆಯ್ಕೆಯಾದ ಕೆಲ ಅಭ್ಯರ್ಥಿಗಳ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕ ಹಾಗೂ ಗುಜರಾತ್ ಎರಡೂ ರಾಜ್ಯಗಳಲ್ಲಿ ಇಡಿ ಅಧಿಕಾರಿಗಳು ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿವೆ. ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ೧೦ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸಿಆರ್ ಪಿಎಫ್ ಸಿಬ್ಬಂದಿಗಳ ಭದ್ರತೆಯಲ್ಲಿ ದಾಳಿ ನಡೆಸಿದ್ದಾರೆ. ದಾಅಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕೆಪಿಎಸ್ ಸಿ ಕಚೇರಿ, ಕೆಪಿಎಸ್ ಸಿ ಸದಸ್ಯೆ ಶಾಂತಾ ಹೊಸಮನಿ ಹಾಗೂ ‘M/s ಎಡುಟೆಸ್ಟ್ ಸೊಲ್ಯೂಷನ್ಸ್’ ಸಂಸ್ಥೆ, ಮಧ್ಯವರ್ತಿಗಳು ಮತ್ತು ಆಯ್ಕೆಯಾದ ಕೆಲ ಅಭ್ಯರ್ಥಿಗಳ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅದಿಕಾರಿಗಳು ಬೆಂಗಳೂರು ಮಾತ್ರವಲ್ಲ, ಹಾಸನ, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ರಾಯಚೂರು, ಕಾರವಾರ,ಕಲಬುರಗಿ, ಗುಜರಾತ್ ನ ಅಹಮದಾಬಾದ್ ಸೇರಿದಂತೆ 21 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಪ್ರತಿಯೊಬ್ಬ ಅಭ್ಯರ್ಥಿಯಿಂದ 70 ರಿಂದ 80 ಲಕ್ಷ ರೂ. ಲಂಚ ಪಡೆದಿರುವುದು, ಉತ್ತರ ಪತ್ರಿಕೆ ತಿದ್ದುಪಡಿ ಮತ್ತು ಕೆಪಿಎಸ್‌ಸಿ ಅಧಿಕಾರಿಗಳ ಸಂಬಂಧಿಕರಿಗೆ ಅಕ್ರಮವಾಗಿ ಹುದ್ದೆ ಕೊಡಿಸಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ವಿಧಾನಸೌಧ ಠಾಣೆಯಲ್ಲಿ 4 ಪ್ರತ್ಯೇಕ FIR ದಾಖಲಾಗಿದ್ದವು. ತಮ್ಮ ಪುತ್ರಿಯರ ಅಕ್ರಮ ನೇಮಕಾತಿಗೆ ನೆರವಾದ ಆರೋಪದ ಮೇಲೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜುಲೈ 13 ರಂದು ರಾಜ್ಯಪಾಲರು ಅಮಾನತುಗೊಳಿಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular