HomeKarnatakaBREAKING: ಕೆಪಿಎಸ್ ಸಿ ಹಗರಣ: ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

BREAKING: ಕೆಪಿಎಸ್ ಸಿ ಹಗರಣ: ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಕೆಪಿಎಸ್ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಈ ಮೂಲಕ ಶಿವಶಂಕರಪ್ಪ ಸಾಹುಕಾರ್ ಗೆ ಬಂಧನ ಭೀತಿ ಎದುರಾಗಿದೆ.

ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವಕೀಲರ ವಾದ-ಪ್ರತಿವಾದವನ್ನು ಆಲಿಸಿತು. ಕೆಪಿಎಸ್ ಸಿ ಹಗರಣದ ಪ್ರಮುಖ ಆರೋಪಿ ಬಂಧಿತ ಬಸವರಾಜ್ ಕಿನ್ನಾಳೆ ಕೂಡ ಶಿವಶಮ್ಕರಪ್ಪ ಸಾಹುಕಾರ್ ಸಂಪರ್ಕದಲ್ಲಿದ್ದ. ಪರೀಕ್ಷೆ ದಿನದಂದು ಕೂಡ ಖಾಸಗಿ ಫೋನ್ ನಿಂದ ಫಲಾನುಭವಿಗಳ ಜೊತೆ ಮಾತನಾಡಿದ್ದಾರೆ. ರಾತ್ರಿ ೮ ಗಂಟೆಯವರೆಗೆ ಫಲಾನುಭವಿಗಳ ಜೊತೆ ಮಾತನಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಷ್ಟೇ ಅಲ್ಲ ಶಿವಶಂಕರಪ್ಪ ಪುತ್ರ, ಪುತ್ರಿಯರು ಕೂಡ ಕೆಪಿಎಸ್ ಸಿ ದುರ್ಬಳಕೆಗೆ ಅವಕಾಶ ನೀಡಿದ್ದಾರೆ. ಅಧಿಕಾರಿಗಳು, ಮಧ್ಯವರ್ತಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಶಿವಶಂಕರಪ್ಪ ಅವರ ಇಡೀ ಕುಟುಂಬವ್ರ‍ೇ ವ್ಯವಸ್ಥಿತವಾಗಿ ಅಕ್ರಮದಲ್ಲಿ ಭಾಗಿಯಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸುವಂತೆ ಎಸ್ ಪಿಪಿ ಬಿ.ಎನ್.ಜಗದೀಶ್ ವಾದ ಮಂಡಿಸಿದರು.

ಇದನ್ನು ಆಲಿಸಿದ ನ್ಯಾಯಾಲಯ ಬೇರೆಯವರನ್ನು ಹೋಲಿಸಿದರೆ ಅರ್ಜಿದಾರರ ಪಾತ್ರ ಗಂಭೀರವಾಗಿದೆ. ನೀಟ್ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಿಂದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯಗಳಿಂದಾಗಿಯೇ ದೇಶದಲ್ಲಿ ಇತ್ತೀಚೆಗೆ ಭಾರಿ ಪ್ರತಿಭಟನೆ ನಡೆದಿದೆ. ಹೀಗಾದಲ್ಲಿ ರಾತ್ರಿ ಹಗಲು ಕುಳಿತು ಪರೀಕ್ಷೆಗಳಿಗಾಗಿ ಓದಿದವರ ಕತೆ ಏನಾಗಬೇಕು ಎಂದು ಪ್ರಶ್ನಿಸಿತು. ಅಲ್ಲದೇ, ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಕೆಪಿಎಸ್‌ಸಿ ಮೇಲಿನ ವಿಶ್ವಾಸ ಕಳೆದುಕೊಳ್ಳುವಂತಾಗಿದೆ ಎಂದು ತಿಳಿಸಿತು.

ಅಷ್ಟೇ ಅಲ್ಲದೆ ಅರ್ಜಿದಾರರ ಕುಟುಂಬಸ್ಥರೇ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪವಿದೆ. ಇದೊಂದು ವ್ಯವಸ್ಥಿತ ವಂಚನೆಯಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹೀಗೆಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಮುಚ್ಚಿದ ಲಕೋಟೆಯಲ್ಲಿ ಕೆಲವು ದಾಖಲೆಗಳನ್ನು ಸಲ್ಲಿಸಿದರು. ಇದನ್ನು ಪರಿಶೀಲಿಸಿದ ಪೀಠ, ಈ ದುಷ್ಕೃತ್ಯದಲ್ಲಿ ನಿಮ್ಮ ಪಾತ್ರವೂ ಪತ್ತೆಯಾಗಿದೆ. ಸರ್ಕಾರವು ಒಂದಷ್ಟು ದಾಖಲೆ ನೀಡಿದೆ. ನಿಮ್ಮ ಪುತ್ರಿಯ ನೇಮಕಾತಿಗೆ ಸಂಬಂಧಿಸಿದ ವಾಸ್ತವಿಕ ವಿಚಾರವನ್ನು ನೀವು ಮರೆಮಾಚಿದ್ದೀರಿ. ಮುಚ್ಚಿದ ಲಕೋಟೆಯಲ್ಲಿನ ಅಂಶಗಳು ಗೌಪ್ಯ ವಿಚಾರಗಳಾಗಿದ್ದು, ನಿಮಗೆ ಅದನ್ನು ಬಹಿರಂಗಪಡಿಸಲಾಗದು ಎಂದು ಪೀಠ ತಿಳಿಸಿತು.

ಕೆಪಿಎಸ್‌ ಸಿ ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಶಿವಶಂಕರಪ್ಪ ಸಾಹುಕಾರ್‌ ಮತ್ತಿತರರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ಗಳಾದ 318(3), ಕರ್ನಾಟಕ ಸರ್ಕಾರಿ ಪರೀಕ್ಷೆಗಳ (ಭ್ರಷ್ಟಾಚಾರ ನಿಷೇಧ ಮತ್ತು ಅಕ್ರಮ ನೇಮಕಾತಿ) ತಡೆ ಕಾಯಿದೆ ಸೆಕ್ಷನ್‌ 10ರ ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿರುವಶಿವಶಂಕರಪ್ಪ ಸಾಹುಕಾರ್​, ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಅವರನ್ನು ಬಂಧಿಸುವ ಸಾಧ್ಯತೆ ದಟ್ಟವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular