HomeKarnatakaBREAKING: ಕೆಪಿಎಸ್ ಸಿ ಹಗರಣ: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಗೆ ನ್ಯಾಯಾಂಗ ಬಂಧನ

BREAKING: ಕೆಪಿಎಸ್ ಸಿ ಹಗರಣ: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಗೆ ನ್ಯಾಯಾಂಗ ಬಂಧನ

ಬೆಂಗಳೂರು: ಕೆಪಿಎಸ್ ಸಿಯಲ್ಲಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ಇಂದು ಕೋರಮಂಗಲದಲ್ಲಿರುವ ಬೆಂಗಳೂರಿನ 1ನೇ ಎಸಿಜೆಎಂ ಕೋರ್ಟ್ ನ ಜಡ್ಜ್ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ಗ್ಯಾನೇಂದ್ರ ಕುಮಾರ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಗ್ಯಾನೇಂದ್ರ ಕುಮಾರ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದು, ಐಎಎಸ್ ಅಧಿಕಾರಿ ಜೈಲುಪಾಲಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular