HomeKarnatakaBREAKING: ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ: ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ...

BREAKING: ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ: ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಎಸ್ ಸಿ (ಕರ್ನಾಟಕ ಲೋಕಸೇವಾ ಆಯೋಗ) ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 10ರಂದು ಆದೇಶ ಹೊರಡಿಸಿದ್ದರು. ಇದೀಗ ಹೈಕೋರ್ಟ್ ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶವನ್ನು ರೊದ್ದುಗೊಳಿಸಿದ್ದು, ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಮ್ಕರಪ್ಪ ಸಾಹುಕಾರ್ ಅವರನ್ನು ಮರುನೇಮಕಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತು ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾವ್ ಅವರಿದ್ದ ಹೈಕೋರ್ಟ್ ಪೀಠ ಮಹತ್ವದ ತೀರ್ಪು ನೀಡಿದೆ. ಅಮಾನತುಗೊಳಿಸುವಂತೆ ಸಚಿವ ಸಂಪುಟ ಸಲಹೆ ನೀಡಿಲ್ಲ, ಶಿಫಾರಸು ಮಾಡಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕು ಎಂದು ತಿಳಿಸಿದೆ. ಅಲ್ಲದೇ ಜುಲೈ 10ರಂದು ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದುಗೊಳಿಸಿದ್ದು, 7 ದಿನಗಳಲ್ಲಿ ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಮರುನೇಮಕ ಮಾಡುವಂತೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular