ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ರದ್ದುಗೊಳಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಮೂಲಕ ನೇಮಕಾತಿ ಪರೀಕ್ಷೆಗಳನ್ನು ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
1998 ರಿಂದಲೂ ಗುರುತರ ಆರೋಪ ಕೇಳಿ ಬರುತ್ತಿರುವುದರಿಂದ ಕರ್ನಾಟಕ ಲೋಕಸೇವಾ ಆಯೋಗ ರದ್ದು ಮಾಡಿ UPSC ಮಾದರಿ ರೂಪಿಸಬೇಕು ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ಪರೀಕ್ಷೆ ನಡೆಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ವಿವಿಧ ಇಲಾಖೆಗಳ ನೇಮಕಾತಿಯನ್ನು ಪಾರದರ್ಶಕವಾಗಿ ಮಾಡಬೇಕು. ಇದು ಆಯೋಗದ ಅದರ ಅಧ್ಯಕ್ಷರು ಮತ್ತು ಸದಸ್ಯರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ವಿಫಲವಾಗಿರುವ ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ. ಕೆಪಿಎಸ್ಸಿ ಮೇಲೆ 1998 ರಿಂದಲೂ ಗುರುತರ ಆರೋಪಗಳು ಕೇಳಿ ಬರುತ್ತಿದ್ದು, ಇದನ್ನು ರದ್ದು ಮಾಡಿ ಯುಪಿಎಸ್ಸಿ ಮಾದರಿ ರೂಪಿಸಬೇಕು ಅಥವಾ ಕೆಇಎ ವತಿಯಿಂದ ನೇಮಕಾತಿ ನಡೆಸಬೇಕು ಎಂದು ಹೇಳಿದ್ದಾರೆ.
ಪಶುವೈದ್ಯ ಅಧಿಕಾರಿಗಳ ನೇಮಕಾತಿ ಹಗರಣದ ಕುರಿತಂತೆ ಸರ್ಕಾರ ಪಾರದರ್ಶಕವಾಗಿ ತನಿಖೆ ನಡೆಸುತ್ತಿದ್ದು, ಅಕ್ರಮದಲ್ಲಿ ಭಾಗಿಯಾದ ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರು ಅವರಿಗೆ ಶಿಕ್ಷೆಯಾಗಲಿದೆ. ಸತ್ಯ ಹೊರಗೆ ಬಂದೇ ಬರುತ್ತದೆ ಎಂದು ಹೇಳಿದ್ದಾರೆ.
ಕಷ್ಟಪಟ್ಟು ಓದಿದ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು, ಪ್ರತಿಭಾವಂತರು ಸರ್ಕಾರಿ ಅಧಿಕಾರಿಗಳಾಗಬೇಕು, ಹಗರಣ ಮುಕ್ತ ಮತ್ತು ಪಾರದರ್ಶಕವಾಗಿ ನೇಮಕಾತಿ ನಡೆಯಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಲವು ಹುದ್ದೆಗಳಿಗೆ ಈಗಾಗಲೇ ಪರೀಕ್ಷೆ ನಡೆಸಿ ನೇಮಕಾತಿ ಮಾಡಿದ ಅನುಭವ ಹೊಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆ, ಪರೀಕ್ಷೆ ಮೌಲ್ಯಮಾಪನ ಪಾರದರ್ಶಕವಾಗಿ ನಡೆಯುವಂತೆ ಮೌಖಿಕ ಸಂದರ್ಶನ ಕೂಡ ಪಾರದರ್ಶಕವಾಗಿರುವಂತೆ ಮಾಡಿದಲ್ಲಿ ಇದಕ್ಕೆ ಶಾಶ್ವತ ಪರಿಹಾರ ಸಿಗಲಿದೆ. ನಾನು ಸೇರಿದಂತೆ ಅನೇಕ ಸಚಿವರು ಅಭಿಪ್ರಾಯ ತಿಳಿಸಿದ್ದೇವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಭಾಗವಹಿಸಲು ಜಿಲ್ಲಾಧಿಕಾರಿ ಕರೆ
ಶಿವಮೊಗ್ಗ: ಸರ್ಕಾರದ ನಿರ್ದೇಶನದಂತೆ ದಿನಾಂಕ 15-09-2026 ರಂದು ಯುವ ಸಂಸತ್ತು ಸಭೆಗೆ ಚಾಲನೆ ನೀಡುವ ಮೂಲಕ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಶಿವಮೊಗ್ಗ ಇವರ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮವು ದಿನಾಂಕ: 15-09-2026 ರ ಬೆಳಿಗ್ಗೆ 10 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನ, ಶಿವಮೊಗ್ಗ ಇಲ್ಲಿ ನಡೆಯಲಿದೆ.
ಈ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಎಲ್ಲಾ ಇಲಾಖೆಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಕೋರಿದ್ದಾರೆ.

