HomeKarnatakaKPTCL ಸಹಾಯಕ ಇಂಜಿನಿಯರ್ ಗಳ ನೇಮಕಾತಿಗೆ ಹೈಕೋರ್ಟ್ ಅನುಮತಿ

KPTCL ಸಹಾಯಕ ಇಂಜಿನಿಯರ್ ಗಳ ನೇಮಕಾತಿಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ-KPTCL ಕಿರಿಯ ಸಹಾಯಕ ಇಂಜಿನಿಯರ್ ಗಳ ನೇಮಕಾತಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಕೆಪಿಟಿಸಿಎಲ್ ಗೆ 404 ಕಿರಿಯ ಸಹಾಯಕ ಇಂಜಿನಿಯರ್ ಗಳ ನೇಮಕಕ್ಕೆ ಷರತ್ತುಬದ್ಧ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಹೈಕೋರ್ಟ್ ನ ಅಂತಿಮ ತೀರ್ಪಿಗೆ ನೇಮಕಾತಿ ಬದ್ಧವಾಗಿರಬೇಕು ಹಾಗೂ ಸೇವಾ ಜೇಷ್ಠತೆಯನ್ನು ಕಾಯ್ದುಕೊಳ್ಳಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಪಿಟಿಸಿಎಲ್ ಆಯ್ಕೆ ಪರೀಕ್ಷೆ ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ಕೆಲ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಆನ್ ಲೈನ್ ಅಪ್ಲಿಕೇಷನ್ ಸಂದರ್ಭದಲ್ಲಿ ಅಭ್ಯರ್ಥಿಗಳ ಫೋಟೋ ಸಿಗ್ನೇಚರ್ ಟೆಕ್ನಿಕಲ್ ಸಮಸ್ಯೆ ಇತ್ತು. ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಕೋರ್ಟ್ ಮೆಟ್ಟಿಲೇರಿತ್ತು. ಟೆಕ್ನಿಕಲ್ ಸಮಸ್ಯೆಗಳನ್ನು ಸರಿಪಡಿಸಿ ನೇಮಕಾತಿ ಪಟ್ಟಿ ಬಿಡುಗಡೆ ಮಾಡುವಂತೆ ಈ ಹಿಂದೆ ಹೈಕೋರ್ಟ್ ತಿಳಿಸಿತ್ತು. ಆದರೆ ಕೋರ್ಟ್ ಆದೇಶ ನೀಡಿದರೂ ಯಾವುದೇ ಪ್ರಕ್ರಿಯೆ ಆರಂಭಿಸದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular