BIG NEWS: ಕೆಪಿಟಿಸಿಎಲ್: ವಿವಿಧ ಹುದ್ದೆಗಳ 491 ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. 2024 ರ ಅಕ್ಟೋಬರ್ ನಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆ ಮತ್ತು 90 ಕಿರಿಯ ಪವರ್‌ಮ್ಯಾನ್ ಹುದ್ದೆ ಸೇರಿದಂತೆ ಒಟ್ಟು 523 ನಿರ್ವಹಣಾ ಪದವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ಅಧಿಸೂಚನೆ ಹೊರಡಿಸಿತ್ತು. ಮೇ 2025ರಲ್ಲಿ ರಾಜ್ಯದ ವಿವಿದೆಡೆ ಸಹನ ಶಕ್ತಿ ಪರೀಕ್ಷೆ ನಡೆಸಲಾಗಿತ್ತು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಅಂತಿಮವಾಗಿ ಕಿರಿಯ ಸ್ಟೆಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಗೊಂಡ 491 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್‌ ಆಫ್ ಅಂಕಗಳೊಂದಿಗೆ ಪ್ರಕಟಿಸಿತ್ತು. ಅಭ್ಯರ್ಥಿಗಳಿಂದ ನಿಗದಿತ ಸಮಯದಲ್ಲಿ ಬಂದ ಆಕ್ಷೇಪಣೆಗಳನ್ನು ಪರೀಶಿಲಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಆಗಸ್ಟ್ 2025 ರಲ್ಲಿ ತನ್ನ ಅಧಿಕೃತ ವೆಬ್‌ಸೈಟ್‍ನಲ್ಲಿ ಪ್ರಕಟಿಸಿದ್ದು, htpps://kptcl.karnataka.gov.in/recruitment ಜಾಲತಾಣದಲ್ಲಿ ಆಯ್ಕೆ ಪಟ್ಟಿ ಲಭ್ಯವಿದೆ.

ಇನ್ನು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಪವರ್‌ಮ್ಯಾನ್ ಹುದ್ದೆಯ ನೇಮಕಾತಿಗೆ ಆಯ್ಕೆ ಪಟ್ಟಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read