HomeKarnatakaಸಿಎಂ ಸಿದ್ದರಾಮಯ್ಯ ಕೆಂಗಣ್ಣಿಗೆ ಗುರಿಯಾಗಿದ್ದ ಐಎಎಸ್ ಅಧಿಕಾರಿ ಎತ್ತಂಗಡಿ!

ಸಿಎಂ ಸಿದ್ದರಾಮಯ್ಯ ಕೆಂಗಣ್ಣಿಗೆ ಗುರಿಯಾಗಿದ್ದ ಐಎಎಸ್ ಅಧಿಕಾರಿ ಎತ್ತಂಗಡಿ!

ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿ ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಗಣ್ಣಿಗೆ ಗುರಿಯಾಗಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರನ್ನು ತತ್‌ಕ್ಷಣದಿಂದಲೇ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಪಂಕಜ್ ಕುಮಾರ್ ಪಾಂಡೆ (ಕೆಎನ್:2000) ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ (ಇ-ಆಡಳಿತ) ಹುದ್ದೆಗೆ ನೇಮಕ ಮಾಡಲಾಗಿದೆ.

ಡಾ. ರಾಮ್ ಪ್ರಸಾತ್ ಮನೋಹರ್ ವಿ. (ಕೆಎನ್:2010) ಬೆಂಗಳೂರು ಜಲಮಂಡಳಿ ಅಧ್ಯಕ್ಷರನ್ನು ಹೆಚ್ಚುವರಿಯಾಗಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಅಸಮಾಧಾನ: ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಗಣ್ಣಿಗೆ ಗುರಿಯಾಗಿದ್ದರು. ಮುಖ್ಯಮಂತ್ರಿಗಳ 4 ಸಭೆಗೆ ಗೈರಾಗಿದ್ದ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಶೋಕಾಸ್ ನೋಟಿಸ್ ನೀಡಿದ್ದರು.

24 ಗಂಟೆಗಳಲ್ಲಿ ಮುಖ್ಯಮಂತ್ರಿಗಳ ಸಭೆಗೆ ಏಕೆ ಹಾಜರಾಗಲಿಲ್ಲ?, ಪೋನ್ ಕರೆ ಏಕೆ ಸ್ವೀಕಾರ ಮಾಡುವುದಿಲ್ಲ? ಎಂಬ ಆರೋಪಕ್ಕೆ ವಿವರಣೆ ನೀಡಬೇಕು ಎಂದು ಪಂಕಜ್ ಕುಮಾರ್ ಪಾಂಡೆ ಅವರಿಗೆ ಸೂಚನೆ ನೀಡಲಾಗಿತ್ತು. ಈ ಶೋಕಾಸ್ ನೋಟಿದ ಬಳಿಕ ಈಗ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಜನವರಿ 8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ ಲಿಮಿಟೆಡ್ (ಕೆಪಿಸಿಎಲ್)ನ 305ನೇ ನಿರ್ದೇಶಕರ ಮಂಡಳಿಯ ಸಭೆ ಆಯೋಜನೆ ಮಾಡಲಾಗಿತ್ತು. ಇಂಧನ ಸಚಿವ ಕೆ.ಜೆ.ಜಾರ್ಜ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕದ ವಿದ್ಯುತ್ ವಲಯವನ್ನು ಇನ್ನಷ್ಟು ಸಮರ್ಥವಾಗಿಸುವ ಜಾರಿಯಲ್ಲಿರುವ ಯೋಜನೆಗಳ ಕುರಿತು ಚರ್ಚೆ ನಡೆಸಲಾಗಿತ್ತು. ಸಭೆಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಪ್ರಧಾನ ಕಾರ್ಯದರ್ಶಿ (ಹಣಕಾಸು) ರಿತೇಶ್ ಕುಮಾರ್ ಸಿಂಗ್ ಮತ್ತು ಹಿರಿಯ ಕೆಪಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಆದರೆ ಈ ಸಭೆಗೆ ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಗೈರು ಹಾಜರಾಗಿದ್ದರು. ಇದು ಅಲ್ಲದೇ ಸಿಎಂ ಅಧ್ಯಕ್ಷತೆಯಲ್ಲಿ ನಡೆದ 4 ಸಭೆಗೆ ಅವರು ಗೈರಾಗಿದ್ದಾರೆ ಎಂಬ ಆರೋಪವಿತ್ತು.

ಸಚಿವ ಕೆ.ಜೆ.ಜಾರ್ಜ್ ಅವರಿಗೆ ಪಂಕಜ್ ಕುಮಾರ್ ಪಾಂಡೆ ಆಪ್ತರು. ಅವರಿಗೆ ಶೋಕಾಸ್ ನೀಡಿದ್ದಕ್ಕೆ ಅವರು ಅಸಮಾಧಾನಗೊಂಡಿದ್ದರು ಎಂಬ ಸುದ್ದಿಯೂ ಇದೆ. ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಮುಂದಾಗಿದ್ದರು ಎಂಬ ಎರಡು ದಿನದ ಹಿಂದಿನ ಸುದ್ದಿಗೂ ಇದಕ್ಕೂ ಸಂಬಂಧವಿದೆ ಎಂಬ ಮಾಹಿತಿ ಇದೆ.

ಉತ್ತರ ಭಾರತ ಮೂಲದವರಿಗೆ ಕೆಲವು ಟೆಂಡರ್‌ಗಳನ್ನು ಕೊಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪಂಕಜ್ ಕುಮಾರ್ ಪಾಂಡೆ ಮೇಲೆ ಹಲವು ಬಾರಿ ಗರಂ ಆಗಿದ್ದರು. ಸಭೆಗಳಿಗೆ ಗೈರು, ಪೋನ್ ಕರೆಗೆ ಉತ್ತರ ನೀಡುವುದಿಲ್ಲ ಸೇರಿ ಎಲ್ಲಾ ಆರೋಪಗಳ ಬಳಿಕ ಈಗ ಅವರನ್ನು ಎತ್ತಗಂಡಿ ಮಾಡಲಾಗಿದೆ.

ಮಾಹಿತಿಗಳ ಪ್ರಕಾರ ಪಂಕಜ್ ಕುಮಾರ್ ಪಾಂಡೆ ಸಿಎಂ ಸಿದ್ದರಾಮಯ್ಯ ನಡೆಸಿದ ಒಂದು ಸಭೆಗೆ ಗೈರಾಗಿದ್ದರು. ಅದೇ ಸಮಯದಲ್ಲಿ ಕೆ.ಜೆ.ಜಾರ್ಜ್ ನಡೆಸುತ್ತಿದ್ದ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು. ಆದರೆ ಟೆಂಡರ್ ವಿಚಾರದಲ್ಲಿನ ಆರೋಪಗಳನ್ನು ಪಂಕಜ್ ಕುಮಾರ್ ಪಾಂಡೆ ಕಚೇರಿ ಸಿಬ್ಭಂದಿಗಳು ತಳ್ಳಿ ಹಾಕಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular