SHOCKING NEWS: ಬೀದಿ ರೌಡಿಗಳಂತೆ ಬಿಯರ್ ಬಾಟಲ್ ಗಳಲ್ಲಿ ಹೊಡೆದಾಡಿಕೊಂಡ KPTL ಅಧಿಕಾರಿಗಳು

ತುಮಕೂರು: ಸರ್ಕಾರಿ ಅಧಿಕಾರಿಗಳು ಭರ್ಜರಿ ಎಣ್ಣೆ ಪಾರ್ಟಿ ಮಾಡಿ, ಬಟ್ಟೆ ಬಿಚ್ಚಿಕೊಂಡು ಬೀದಿ ರೌಡಿಗಳಂತೆ ಹೊಡೆದಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಕೆಪಿಟಿಸಿಎಲ್ ಅಧಿಕಾರಿಗಳು ನಡೆಸಿದ್ದ ಎಣ್ಣೆ ಪಾರ್ಟಿಯಲ್ಲಿ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಕೆಪಿಟಿಸಿಎಲ್ ಅಧಿಕಾರಿಗಳು ಬಟ್ಟೆ ಬಿಚ್ಚಿಕೊಂಡು, ಬಿಯರ್ ಬಾಟಲ್ ನಲ್ಲಿ ತಲೆಗೆ ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದಾರೆ.

ಮೇ 23ರಂದು ಪಾವಗಡದ ಹೊರವಲಯದಲ್ಲಿ ಎಣ್ಣೆ ಪಾರ್ಟಿ ಆಯೋಜಿಸಲಾಗಿತ್ತು. ಕೆಲಸಕ್ಕೆ ಗೈರಾಗಿ ಕೆಪಿಟಿಸಿಎಲ್ ಅಧಿಕಾರಿಗಳು ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೇ ರೌಡಿಗಳಂತೆ ಹೊಡೆದಾಡಿಕೊಂಡಿದ್ದಾರೆ.

ಕೆಪಿಟಿಸಿಎಲ್ ಇಂಜಿನಿಯರ್ ಗಳಾದ ಶ್ರೀಧರ್, ವಾದಿರಾಜ್ ಹಾಗೂ ಬೆಸ್ಕಾಂ ಸಿಬ್ಬಂದಿ ನರಸಿಂಹಮೂರ್ತಿ, ಸಂತೋಷ್ ನಡುವೆ ಗಲಾಟೆಯಾಗಿದ್ದು, ಈ ವೇಳೆ ಬಿಯರ್ ಬಾಟಲ್ ನಲ್ಲಿ ಮನಬಂದಂತೆ ಹೊಡೆದಾಡಿಕೊಂಡಿದ್ದಾರೆ. ಪಾವಗಡ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read