HomeKarnatakaಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಕೆಪಿಟಿಸಿಎಲ್ ನಲ್ಲಿ 902 ಹುದ್ದೆಗಳ ನೇಮಕಾತಿಗೆ ಆದೇಶ

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಕೆಪಿಟಿಸಿಎಲ್ ನಲ್ಲಿ 902 ಹುದ್ದೆಗಳ ನೇಮಕಾತಿಗೆ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) 902 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ.

ಮಾರ್ಚ್ ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ವಿದ್ಯುತ್ ಸಹಾಯಕ ಇಂಜಿನಿಯರ್ ಗಳು, 17 ಸಿವಿಲ್ ಸಹಾಯಕ ಇಂಜಿನಿಯರ್ ಗಳು, 15 ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

535 ಅಭ್ಯರ್ಥಿಗಳಲ್ಲಿ 502 ಕಿರಿಯ ಇಂಜಿನಿಯರ್ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಇವರಲ್ಲಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದಾರೆ. 429 ಅಭ್ಯರ್ಥಿಗಳು ಇತರೆ ವೃಂದದವರಾಗಿದ್ದಾರೆ.

360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮೇ 24 ಕೊನೆಯ ದಿನವಾಗಿದ್ದು, ಆಕ್ಷೇಪಣೆ ಸ್ವೀಕರಿಸಿ ಪರಿಶೀಲಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ, ಮೀಸಲಾತಿ ಕೋರಿದ ದಾಖಲೆಗಳ ಬಗ್ಗೆ ಪ್ರಾಧಿಕಾರದಿಂದ ದೃಢೀಕರಣ ಪಡೆದು ಸ್ಥಳ ನಿಯಕ್ತಿ ಮಾಡಿ ನೇಮಕಾತಿ ಆದೇಶ ನೀಡಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular