HomeLatest NewsBIG NEWS: KRIDLನಲ್ಲಿ 72 ಕೋಟಿ ಅಕ್ರಮ: ಲೋಕಾಯುಕ್ತಕ್ಕೆ ದೂರು

BIG NEWS: KRIDLನಲ್ಲಿ 72 ಕೋಟಿ ಅಕ್ರಮ: ಲೋಕಾಯುಕ್ತಕ್ಕೆ ದೂರು

ಕೊಪ್ಪಳ: ಮಹರ್ಷಿ ವಾಲ್ಮೀಕಿ ನಿಗಬದಲ್ಲಿ ಬಹುಕೋಟಿ ಅಕ್ರಮ ಪ್ರಕರಣದ ಮಾದರಿಯಲ್ಲಿಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಕೊಪ್ಪಳ ವಿಭಾಗದಲ್ಲಿಯೂ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಕೊಪ್ಪಳ ವಿಭಾಗದಲ್ಲಿ ಬರೋಬ್ಬರಿ 72 ಕೋಟಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಇಬ್ಬರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019 ರಿಂದ 2025ರವರೆಗೆ ಕೊಪ್ಪಳ ಜಿಲ್ಲೆಯ ವಿವಿಧೆಡೆ ನಡೆದ 96 ಕಾಮಗಾರಿಗಳಲ್ಲಿ ಅಂದಿನ ಇಇ ಆಗಿದ್ದ ಝಡ್ ಎಂ ಚಿಂಚೋಳಿಕರ್ ಹಾಗೂ ಹೊರಗುತ್ತಿಗೆ ನೌಕರನಾಗಿದ್ದ ಕಳಕಪ್ಪ ನಿಡಗುಂದಿ ಎಂಬುವವರು 72 ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular