ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಬಹಳ ದುರ್ಬಲವಾಗಿದ್ದು, ಹಲವು ಕಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಹನಿ ಹನಿ ನೀರಿಗೂ ಜನರು ಪರದಾಡುವಂತಾಗಿದ್ದು, ಜನರು ಕಂಗಾಲಾಗಿದ್ದಾರೆ.
2-3 ದಿನದಲ್ಲಿ ಮಳೆ ಬಾರದೇ ಇದ್ದರೆ ಮೋಡ ಬಿತ್ತನೆಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಇತ್ತೀಚೆಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದರು. ಈ ಕುರಿತು ಸಚಿವ ಕೃಷ್ಣಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರವು ಮೋಡ ಬಿತ್ತನೆಗೆ ಚಿಂತನೆ ಮಾಡಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮಳೆ ನಿಧಾನವಾಗಿ ಬಂದರೂ ಕರ್ನಾಟಕದಲ್ಲಿ ಮಳೆ ಕೊರತೆ ಆಗಲ್ಲ. ಜೂನ್ ತಿಂಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸ್ವಲ್ಪ ಮಳೆ ಸಮಸ್ಯೆಯಾಗಬಹುದು. ಆದರೆ ಜುಲೈನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ ಎಂದು ಸಚಿವರು ಸ್ಪಷ್ಟನೆ ನೀಡಿದರು.
You Might Also Like
TAGGED:krisha bairgowda