HomeAgricultureರೈತರಿಗೆ ಗುಡ್ ನ್ಯೂಸ್: ಪಂಪ್ ಸೆಟ್, ಲಘು ನೀರಾವರಿ ಘಟಕ ಸೇರಿ 'ಕೃಷಿ ಭಾಗ್ಯ' ಯೋಜನೆಯಡಿ...

ರೈತರಿಗೆ ಗುಡ್ ನ್ಯೂಸ್: ಪಂಪ್ ಸೆಟ್, ಲಘು ನೀರಾವರಿ ಘಟಕ ಸೇರಿ ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ

ಶಿವಮೊಗ್ಗ: ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗುವುದು.

ಜಮೀನಿನಲ್ಲಿ ಬದು, ಕೃಷಿ ಹೊಂಡ, ಕೃಷಿ ಹೊಂಡದ ಸುತ್ತ ತಂತಿ ಬೇಲಿ, ಕೃಷಿ ಹೊಂಡಕ್ಕೆ ಪಾಲಿಥಿನ್ ಹೊದಿಕೆ, ಪಂಪ್ಸೆಟ್ ಮತ್ತು ಲಘು ನೀರಾವರಿ ಘಟಕಗಳನ್ನು ಅನುಷ್ಠಾನಗೊಳಿಸಲು ಸಹಾಯಧನ ನೀಡಲಾಗುವುದು.

ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಿದೆ. ಸಾಮಾನ್ಯ ವರ್ಗದ ರೈತರಿಗೆ ಶೇಕಡ 80ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇಕಡ 90ರಷ್ಟು ಸಹಾಯಧನ ಕಲ್ಪಿಸಲು ಅವಕಾಶವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ಪೋರ್ಟ್ ಅಳತೆಯ ಫೋಟೋ, ಜಾತಿ ಪ್ರಮಾಣ ಪತ್ರ, ಪಹಣಿ, ಬ್ಯಾಂಕ್ ಪಾಸ್ ಬುಕ್ ಪ್ರತಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಎಸ್.ಟಿ. ರಮೇಶ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular