HomeEntertainmentಸ್ನೇಹಿತನ ನಿಧನದ ಆಘಾತ: "ಬೇರೆ ದಾರಿಯಿಲ್ಲದೆ ದುಃಖದ ಜೊತೆ ಬದುಕುತ್ತಿದ್ದೇನೆ" ಎಂದು ನಟಿ ಕೃಷಿ ತಾಪಂಡ...

ಸ್ನೇಹಿತನ ನಿಧನದ ಆಘಾತ: “ಬೇರೆ ದಾರಿಯಿಲ್ಲದೆ ದುಃಖದ ಜೊತೆ ಬದುಕುತ್ತಿದ್ದೇನೆ” ಎಂದು ನಟಿ ಕೃಷಿ ತಾಪಂಡ ಭಾವುಕ ಪೋಸ್ಟ್‌

ಬೆಂಗಳೂರು: ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಅವರ ಆಪ್ತ ಸ್ನೇಹಿತ, ಉದ್ಯಮಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಇಡೀ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಆಘಾತದಿಂದ ಇನ್ನೂ ಹೊರಬರದ ನಟಿ ಕೃಷಿ ತಾಪಂಡ, ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಅತ್ಯಂತ ದುಃಖದ ಸಾಲುಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ಮನದ ನೋವನ್ನು ತೋಡಿಕೊಂಡಿದ್ದಾರೆ.

ಏಕಾಂತದಲ್ಲಿ ಕುಳಿತುಕೊಂಡಿರುವ ಚಿತ್ರಗಳು, ಶ್ವಾನಗಳು, ಪುಸ್ತಕ ಹಾಗೂ ಗಿಡಗಳಿಗೆ ನೀರು ಹಾಕುತ್ತಿರುವ ಸರಣಿ ಫೋಟೋಗಳನ್ನು ಹಂಚಿಕೊಂಡಿರುವ ಅವರು, ತಮ್ಮ ಜೀವನದ ಇಂದಿನ ಶೂನ್ಯತೆಯನ್ನು ಬಿಚ್ಚಿಟ್ಟಿದ್ದಾರೆ.

ಕೃಷಿ ತಾಪಂಡ ಪೋಸ್ಟ್‌ನಲ್ಲಿ ಏನಿದೆ?


“ದುಃಖವನ್ನು ಹೊತ್ತುಕೊಂಡು ಬದುಕುವುದಲ್ಲ… ಅದರ ಜೊತೆ ಬದುಕುವುದನ್ನು ಕಲಿಯುತ್ತಿದ್ದೇನೆ. ಇದು ನಾನು ಇಷ್ಟಪಟ್ಟು ಆಯ್ಕೆ ಮಾಡಿಕೊಂಡಿದ್ದಲ್ಲ… ಬದಲಿಗೆ ಬೇರೆ ದಾರಿಯೇ ಇಲ್ಲದ ಕಾರಣ” ಎಂದು ಕೃಷಿ ಅತ್ಯಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡ ನಂತರದ ಜೀವನ ತಮಗೆ ಎಷ್ಟು ‘ಅಪೂರ್ಣ’ ಎಂಬುದನ್ನು ಈ ಪೋಸ್ಟ್ ಮೂಲಕ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

View this post on Instagram

A post shared by Krishi Thapanda (@krishithapanda)

“ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ, ಕೈಮುಗಿದು ಬೇಡಿಕೊಳ್ಳುತ್ತೇನೆ”
ಇದಕ್ಕೂ ಮುನ್ನ ನಿರಂತರ ಊಹಾಪೋಹಗಳು ಹಾಗೂ ಪ್ರಶ್ನೆಗಳಿಂದ ಬೇಸತ್ತಿದ್ದ ಕೃಷಿ ತಾಪಂಡ ಸುದೀರ್ಘ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು.

“ನನ್ನ ಜೀವನದಲ್ಲಿ ಇಂಥದ್ದೊಂದು ಸ್ಥಿತಿ ಬರುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ನನ್ನ ಹೃದಯಕ್ಕೆ ಅತ್ಯಂತ ಹತ್ತಿರವಾಗಿದ್ದ, ಸದಾ ನನ್ನ ಬೆನ್ನಿಗೆ ನಿಂತು ಕಾಯುತ್ತಿದ್ದ ವ್ಯಕ್ತಿಯನ್ನು ಕಳೆದುಕೊಂಡಿದ್ದೇನೆ. ಈ ಶೂನ್ಯವನ್ನು ತುಂಬಲು ಸಾಧ್ಯವಿಲ್ಲ. ನಾವು ಇಷ್ಟೊಂದು ದೊಡ್ಡ ನಷ್ಟದ ನೋವಿನಲ್ಲಿದ್ದರೂ, ಜನ ನಮಗೆ ಪ್ರಶ್ನೆಗಳನ್ನು ಕೇಳಿ ವಿವರಣೆ ನಿರೀಕ್ಷಿಸುತ್ತಿದ್ದಾರೆ. ನನ್ನ ಮೇಲೆ, ನನ್ನ ಸ್ನೇಹಿತರು ಹಾಗೂ ಕುಟುಂಬದವರ ಮೇಲೆ ತೀವ್ರ ಒತ್ತಡವಿದೆ” ಎಂದು ಅಳಲು ತೋಡಿಕೊಂಡಿದ್ದರು.

ಮುಂದುವರಿದು ಮಾತನಾಡಿದ್ದ ಅವರು, ನೀವು ಯಾರನ್ನಾದರೂ ನಗಿಸಲು ಸಾಧ್ಯವಾಗದಿದ್ದರೆ ಪರವಾಗಿಲ್ಲ, ಕನಿಷ್ಠ ಅವರ ಕಣ್ಣೀರಿಗೆ ಕಾರಣರಾಗಬೇಡಿ. ಯಾರಿಗಾದರೂ ಬದುಕಲು ಕಾರಣ ನೀಡದಿದ್ದರೂ, ಅವರು ಭರವಸೆ ಕಳೆದುಕೊಳ್ಳುವಂತೆ ಮಾಡಬೇಡಿ. ಕೈಮುಗಿದು ಕೇಳುತ್ತೇನೆ, ಮೃತರ ಆತ್ಮಕ್ಕೆ ಶಾಂತಿ ಸಿಗಲು ಬಿಡಿ (Let him rest in peace). ಅವರ ಕುಟುಂಬ, ಸ್ನೇಹಿತರು ಮತ್ತು ನಮ್ಮನ್ನು ಈ ದುಃಖದಲ್ಲಿ ಶಾಂತಿಯಿಂದ ಇರಲು ಬಿಡಿ. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ ಎಂದು ನಿಮ್ಮಲ್ಲಿ ಬೆಗ್ ಮಾಡುತ್ತೇನೆ ಎಂದು ಮನವಿ ಮಾಡಿದ್ದರು.

ತನಿಖೆ ಮುಂದುವರಿಸಿದ ಪೊಲೀಸರು:
ಆರ್‌ಆರ್ ನಗರದ ಎಲಿಗೆಂಟ್ ಟೆರೇಸ್ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ತಂದೆ ನೀಡಿದ ದೂರಿನನ್ವಯ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular