HomeLatest NewsBIG NEWS: ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಭೂ ಕಬಳಿಕೆ ಆರೋಪ: ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ...

BIG NEWS: ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಭೂ ಕಬಳಿಕೆ ಆರೋಪ: ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ BJP

ಕೋಲಾರ: ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ನರಸಪುರ ಹೋಬಳಿಯ ಗರುಡನಪಾಳ್ಯದಲ್ಲಿ 21 ಎಕರೆ ಜಮೀನು ಕಬಳಿಸಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ನಾಯಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಕೋಲಾರ ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂ ಶಕ್ತಿ ಛಲಪತಿ ನೇತೃತ್ವದಲ್ಲಿ ದೂರು ನೀಡಲಾಗಿದೆ.

ಕಂದಾಯ ಸಚಿವರು ಗರಡುನಪಾಳ್ಯದಲ್ಲಿ ಸರ್ಕಾರಿ ಭೂಮಿ ಕಬಳಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಸರ್ವೆ ನಂಬರ್ 46, 47ರಲ್ಲಿ 21 ಎಕರೆ ಭೂಮಿ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular