ರಾಜ್ಯಾದ್ಯಂತ ಎಸಿ ಕೋರ್ಟ್ ಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ 6 ತಿಂಗಳ ಗಡುವು: 11 ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯ

ಬೆಂಗಳೂರು: ರಾಜ್ಯಾದ್ಯಂತ ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಆರು ತಿಂಗಳಲ್ಲಿ ವಿಲೇವಾರಿ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಗಡುವು ನೀಡಿದ್ದಾರೆ.

ವಿಕಾಸಸೌಧದಲ್ಲಿ ಬುಧವಾರ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿದ ಸಚಿವರು, ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳ ಇತ್ಯರ್ಥ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ವರ್ಷ ಕಂದಾಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ 73,682 ಪ್ರಕರಣ ಬಾಕಿ ಇದ್ದವು. ಅದರಲ್ಲಿ 33,027 ಪ್ರಕರಣ ಒಂದು ವರ್ಷದಲ್ಲಿ ವಿಲೇವಾರಿಯಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಕರಾರು ಪ್ರಕರಣ ಇತ್ಯರ್ಥಗೊಳಿಸಿ ರೈತರಿಗೆ ಶೀಘ್ರ ನ್ಯಾಯ ಒದಗಿಸಲು ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕುಂದಾಪುರ ಸೇರಿ 11 ಜಿಲ್ಲೆಗಳಲ್ಲಿ 20 ಕ್ಕೂ ಹೆಚ್ಚು ವಿಶೇಷ ನ್ಯಾಯಾಲಯಗಳಿಗೆ ಚಾಲನೆ ನೀಡಲಾಗಿದೆ. ಈ ಮೂಲಕ ಪ್ರಕರಣಗಳ ಶೀಘ್ರ ವಿಲೇವಾರಿಗೆ ವೇಗ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read