ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬಗರ್ ಹುಕುಂ ಸಾಗುವಳಿ ಅರ್ಜಿ ವಿಲೇವಾರಿಗೆ ನ. 25ರ ಗಡುವು

ಬೆಂಗಳೂರು: ಬಗರ್ ಹುಕುಂ ಸಾಗುವಳಿ ಅರ್ಜಿ ವಿಲೇವಾರಿಗೆ ತಹಶಿಲ್ದಾರ್ ಗಳಿಗೆ ನವೆಂಬರ್ 25ರ ಗಡುವು ನೀಡಲಾಗಿದೆ.

ಬಗರ್ ಹುಕುಂ ಭೂಮಿ ಮಂಜೂರಾತಿಗೆ ಸಲ್ಲಿಸಲಾದ ಅರ್ಜಿಗಳನ್ನು ನವೆಂಬರ್ 25 ರ ಒಳಗೆ ವಿಲೇವಾರಿ ಮಾಡದ ತಹಶೀಲ್ದಾರ್ ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತಾಗಿ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಕೃಷ್ಣ ಬೈರೇಗೌಡ, ಬಗರ್ ಹುಕುಂ ಭೂಮಿ ಮಂಜೂರಾತಿಗೆ ಸಲ್ಲಿಕೆಯಾದ ಅರ್ಜಿಗಳ ಪೈಕಿ ಅನರ್ಹ ಮತ್ತು ಅರ್ಹ ಅರ್ಜಿಗಳನ್ನು ತಹಶೀಲ್ದಾರ್ ಗಳು ನವೆಂಬರ್ 25 ರೊಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲಾ  ಜಿಲ್ಲಾಧಿಕಾರಿಗಳು ನವಂಬರ್ 26ರಂದು ಬೆಳಗ್ಗೆ ತಮ್ಮ ಜಿಲ್ಲೆಗಳ ವ್ಯಾಪ್ತಿಯ ಪಟ್ಟಿಯನ್ನು ಒಟ್ಟುಗೂಡಿಸಿ ತಮಗೆ ಸಲ್ಲಿಸುವಂತೆ ಕೃಷ್ಣಬೈರೇಗೌಡ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read