HomeKarnatakaಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಅರ್ಹರಿಗೆ ಜಮೀನು ಮಂಜೂರು ಮಾಡಲು ಮೊಬೈಲ್ ಆ್ಯಪ್

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಅರ್ಹರಿಗೆ ಜಮೀನು ಮಂಜೂರು ಮಾಡಲು ಮೊಬೈಲ್ ಆ್ಯಪ್

ತುಮಕೂರು: ಬಗರ್ ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರು ಮಾಡುವ ಸಲುವಾಗಿ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ತುಮಕೂರಿನಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಮಾತನಾಡಿ, ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಅರ್ಹರಿಗೆ ಮಾತ್ರ ಜಮೀನು ಮಂಜೂರು ಮಾಡುವ ಉದ್ದೇಶದಿಂದ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪ್ಲಿಕೇಶನ್ ಜೊತೆಗೆ ಹಿಂದಿನ 5 ವರ್ಷಗಳಲ್ಲಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗುವಂತೆ ಮಾಡಲಾಗುವುದು. ಅದನ್ನು ಪರಿಶೀಲಿಸಿ ಅರ್ಹರಿಗೆ ಜಮೀನು ಮಂಜೂರು ಮಾಡಲು ಅನುಕೂಲವಾಗಲಿದೆ. ಕೆಲವರು ಸಾಗುವಳಿ ಮಾಡದೆ ಸುಳ್ಳು ಮಾಹಿತಿ ನೀಡಿ ಅರ್ಜಿ ಹಾಕಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular