HomeAgricultureರೈತರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ: ‘ಅಕ್ರಮ’ ಬಗರ್ ಹುಕುಂ ಸಾಗುವಳಿ ಭೂಮಿ ‘ಸಕ್ರಮ’ ಶೀಘ್ರ

ರೈತರಿಗೆ ಮತ್ತೊಂದು ಭರ್ಜರಿ ಸಿಹಿ ಸುದ್ದಿ: ‘ಅಕ್ರಮ’ ಬಗರ್ ಹುಕುಂ ಸಾಗುವಳಿ ಭೂಮಿ ‘ಸಕ್ರಮ’ ಶೀಘ್ರ

ಬೆಂಗಳೂರು: ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಶೀಘ್ರವೇ ಸಕ್ರಮಗೊಳಿಸಿಕೊಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸ ಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರಿಗೆ ಬಗರ್ ಹುಕುಂ ತಂತ್ರಾಂಶ ಬಳಕೆ ಕುರಿತಾಗಿ ಪ್ರಾತ್ಯಕ್ಷಿಕೆ ತೋರಿಸಲಾಗಿದೆ. ಈ ವೇಳೆ ಸಚಿವರು ಮಾಹಿತಿ ಪಡೆದು, ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ಕುಂತ್ರಾಂಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೂಪರಿಶೀಲನೆಗೆ ಬಗರ್ ಹುಕುಂ ತಂತ್ರಾಂಶವನ್ನು ಕಾರ್ಯಯೋಜನೆಗೊಳಿಸಬೇಕು. ನಮೂನೆ ಸಂಖ್ಯೆ 50, 53, 57 ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವುಗಳನ್ನು ನ್ಯಾಯಯುತವಾಗಿ ವಿಲೇವಾರಿ ಮಾಡಬೇಕು. ಅನಧಿಕೃತವಾಗಿ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದ್ದರೆ ಆಕ್ರಮ ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular