ಮಳೆಯಿಂದ ಮನೆ ಹಾನಿಯಾದಲ್ಲಿ ವಸತಿ ಯೋಜನೆಯಡಿ ಮನೆ

ಬೆಂಗಳೂರು: ಹೆಚ್ಚು ಮಳೆಯಾದ ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿವಿಧ ಜಿಲ್ಲೆಗಳ ಏಳರಿಂದ ಎಂಟು ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದೇನೆ. ತಕ್ಷಣ ಪರಿಹಾರ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಮಳೆಯಿಂದ ಮನೆ ಹಾನಿ ಆದರೆ ವಸತಿ ಯೋಜನೆ ಮನೆ ಕೊಡಬೇಕು. ರಸ್ತೆ ಕುಸಿದರೆ ಸೋಮವಾರದೊಳಗೆ ದುರಸ್ತಿ ಮಾಡಬೇಕು. ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಲಾಗಿದೆ. ಅಂಗನವಾಡಿ, ಶಾಲೆಗಳ ರಿಪೇರಿ ಆಗಬೇಕಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಎಸ್.ಪಿ. ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಬೇಕು ಎಂದು ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಪ್ರಕೃತಿ ವಿಕೋಪದಿಂದಾಗುವ ಅನಾಹುತ ತಡೆಯಲು ತಕ್ಷಣವೇ ಕ್ರಮವಹಿಸಲು ಸೂಚನೆ

ಶುಕ್ರವಾರ ಮಲೆನಾಡು, ಕರಾವಳಿ, ಪಶ್ಚಿಮಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಬಾದಿತವಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ತೀವ್ರತರವಾದ ಮಳೆಯಾಗುತ್ತಿದ್ದು, ಇದರಿಂದ ಉಂಟಾದ ರಸ್ತೆ ಸಂಪರ್ಕ ಕಡಿತ, ಶಾಲೆ ಹಾಗೂ ಅಂಗನವಾಡಿ ಸೋರುವಿಕೆ ಮತ್ತು ವಿದ್ಯುತ್ ಸಂಪರ್ಕ ಕಡಿತದ ದುರಸ್ಥಿಯನ್ನು ತಕ್ಷಣವೇ ಕೈಗೊಳ್ಳುವ ಮೂಲಕ ಯಥಾಸ್ಥಿತಿಯಂತೆ ನಿರ್ವಹಣೆ ಮಾಡಲು ಮುಂದಿನ ಮೂರು ದಿನಗಳ ಕಾಲ ಕಟ್ಟೆಚ್ಚರವಹಿಸುವಂತೆ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read