ದೀರ್ಘಕಾಲದಿಂದ ಒಂದೇ ಕಡೆ ಠಿಕಾಣಿ ಹೂಡಿದ ಅಧಿಕಾರಿಗಳು, ನೌಕರರ ಎತ್ತಂಗಡಿ

ಬೆಂಗಳೂರು: ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಸರ್ಕಾರದ ಕಣ್ಣು ಬಿದ್ದಿದ್ದು, ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಪಟ್ಟಿ ಕೊಡಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ಕೆಲವು ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿವೆ. ಅಂತಹ ಅಧಿಕಾರಿಗಳ ಪಟ್ಟಿ ಕಳುಹಿಸುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆ ಇತ್ತೀಚೆಗೆ ನಡೆದಿದ್ದು, ಜನರ ಸಮಸ್ಯೆಯನ್ನು ಸಕಾರಾತ್ಮಕವಾಗಿ ಇತ್ಯರ್ಥಪಡಿಸಲು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚಿಸಲಾಗಿದೆ.

ಅನೇಕ ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ, ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿದ್ದು, ಅಂತಹ ಅನೇಕ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅಂತಹ ಅಧಿಕಾರಿಗಳ ಪಟ್ಟಿ ಕಳುಹಿಸುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read